Download Our App

Follow us

Home » ಜಿಲ್ಲೆ » ಮಂಗಳೂರು : ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ದೋಣಿ ಮುಳುಗಡೆ – ಆರು ಮೀನುಗಾರರ ರಕ್ಷಣೆ..!

ಮಂಗಳೂರು : ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ದೋಣಿ ಮುಳುಗಡೆ – ಆರು ಮೀನುಗಾರರ ರಕ್ಷಣೆ..!

ಮಂಗಳೂರು : ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಸಮುದ್ರದಲ್ಲಿ ಕಲ್ಲುಬಂಡೆಗೆ ಬೋಟ್ ಡಿಕ್ಕಿ ಹೊಡದು ಮುಳುಗಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ವೇಳೆ ಬೋಟ್ ನಲ್ಲಿ ಆರು ಮಂದಿಯನ್ನು ಇತರೆ ಮೀನುಗಾರಿಕಾ ಬೋಟ್ ನವರು ರಕ್ಷಣೆ ಮಾಡಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ.

ದುರಂತಕ್ಕೀಡಾಗಿರುವ ಬೋಟ್ ನ ಹೆಸರು ‘ನವಾಮಿ – ಶಿವಾನಿ’ ಎಂದು ಗುರುತಿಸಲಾಗಿದ್ದು, ಉಳ್ಳಾಲದ ನಯನಾ ಪಿ. ಸುವರ್ಣ ಎಂಬವರಿಗೆ ಸೇರಿದ್ದಾಗಿದೆ. ನಯನಾರ ಪತಿ ಪ್ರವೀಣ್ ಸುವರ್ಣ ಬೋಟ್ ಚಲಾಯಿಸುತ್ತಿದ್ದರೆ, ಉತ್ತರ ಪ್ರದೇಶ ಮೂಲದ ಮೀನುಗಾರರಾದ ಸಮರ ಬಹಾದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ ಮತ್ತು ವಾಸು ಎಂಬವರು ಬೋಟ್ ನಲ್ಲಿದ್ದರು.

ಪ್ರವೀಣ್ ಸುವರ್ಣ ಹಾಗೂ ಐವರು ಮೀನುಗಾರರು ಗುರುವಾರ ಸಂಜೆ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕೆ ಮುಗಿಸಿ ಇಂದು ಮುಂಜಾವ ನಾಲ್ಕು ಗಂಟೆ ಸುಮಾರಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಬೋಟ್ ನ ಪ್ರೊಫೈಲರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಅದು ಹಾನಿಯಾಗಿತ್ತು.

ಈ ವೇಳೆ ಬೋಟ್ ಸಮುದ್ರದ ತೆರೆಗಳ ಅಬ್ಬರಕ್ಕೆ ಸಿಲುಕಿ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇ ಕಲ್ಲಿಗೆ ಬಡಿದಿದೆ. ಇದರಿಂದ ಹಾನಿಗೊಳಗಾದ ಬೋಟ್ ಮುಳುಗಿದೆ ಎಂದು ತಿಳಿದುಬಂದಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ – ನೂತನ ಪಕ್ಷ ಘೋಷಣೆ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here