ಮಂಗಳೂರು : ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಂಗಳೂರು ಹೊರವಲಯ ಪಕ್ಷಿಕೆರೆಯಲ್ಲಿ ನಡೆದಿದೆ. 28 ವರ್ಷದ ಪ್ರಿಯಾಂಕ, 4 ವರ್ಷದ ಹೃದಯ್ ಕೊಲೆಯಾದವರು. ಕಾರ್ತಿಕ್ ಭಟ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾರ್ತಿಕ್ ಭಟ್ ಶುಕ್ರವಾರ ಪತ್ನಿ, ಮಗನನ್ನು ಕೊಂದು ಬಳಿಕ ತಾವು ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ತಿಕ್ ಫ್ಲ್ಯಾಟ್ ಬಳಿಗೆ ಪೊಲೀಸರು ಬಂದಾಗ ಪತ್ನಿ, ಪುತ್ರನ ಶವ ಪತ್ತೆ ಆಗಿದೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಶ್ರೀಗಳು..!
Post Views: 468