ನವದೆಹಲಿ : ಹೊಸ ಭಾರತ ನಿರ್ಮಾಣದ ಕನಸು ಕಂಡ ಕನಸುಗಾರ ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ. ಡಿ. 26ರಂದು ಇಹಲೋಕ ಯಾತ್ರೆ ಮುಗಿಸಿದ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ರಕ್ಷಣಾ ಇಲಾಖೆ ಸಚಿವ ರಾಜ್ನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸೋನಿ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಇದನ್ನೂ ಓದಿ : ಬಾಕ್ಸಿಂಗ್ ಡೇ ಟೆಸ್ಟ್ : ಚೊಚ್ಚಲ ಶತಕ ಸಿಡಿಸಿದ ನಿತೀಶ್ ಕುಮಾರ್.. ಆಸೀಸ್‌ನಲ್ಲಿ ಹೊಸ ರೆಕಾರ್ಡ್!
Post Views: 63