ಪ್ಯಾರಿಸ್ : ಈ ಬಾರಿ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿರುವ ಮನು ಭಾಕರ್, ಇದೀಗ ಸರಬ್ಜೋತ್ ಸಿಂಗ್ ಜೊತೆಗೂಡಿ ಮತ್ತೊಂದು ಪದಕ ಗೆದ್ದಿದ್ದಾರೆ. ಎರಡನೇ ಕಂಚು ಗೆದ್ದು, ಮನು ಬಾಕರ್ ಒಲಿಂಪಿಕ್ನಲ್ಲಿ ಇತಿಹಾಸ ರಚಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂದ್ದು, ಮೂರನೇ ಸ್ಥಾನಕ್ಕಾಗಿ ನಡೆದ ಈ ಸ್ಪರ್ಧೆಯಲ್ಲಿ ರಿಪಬ್ಲಿಕ್ ಆಫ್ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ಅವರನ್ನು ಸೋಲಿಸಿ ಮನುಭಾಕರ್-ಸರಬ್ಜೋತ್ ಸಿಂಗ್ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ.
ಸೋಮವಾರ ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಅರ್ಹತಾ ಸುತ್ತಿನಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಮೂರನೇ ಸ್ಥಾನಗಳಿಸಿ ಕಂಚಿನ ಪದಕದ ಸ್ಪರ್ಧೆಗೆ ಅರ್ಹತೆಗಿಟ್ಟಿಸಿಕೊಂಡಿದ್ದರು. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ಒಟ್ಟು 580 ಅಂಕಗಳನ್ನು ಕಲೆಹಾಕಿದ್ದರು.
ಮತ್ತೊಂದೆಡೆ ರಿಪಬ್ಲಿಕ್ ಆಫ್ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ 579 ಅಂಕಗಳಿಸಿ ನಾಲ್ಕನೇ ಸ್ಥಾನ ಪಡೆದಿದ್ದರು. ಇಲ್ಲಿ 3ನೇ ಮತ್ತು 4ನೇ ಸ್ಥಾನಗಳನ್ನು ಪಡೆದ ಸ್ಪರ್ಧಿಗಳ ನಡುವೆ ಕೇವಲ 1 ಅಂಕಗಳ ವ್ಯತ್ಯಾಸವಿದ್ದಿದ್ದರಿಂದ ಕಂಚಿನ ಪದಕದ ಸ್ಪರ್ಧೆಯಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಲಾಗಿತ್ತು. ಅದರಂತೆ ಇದೀಗ ಕೊರಿಯನ್ ಜೋಡಿಯನ್ನು ಸೋಲಿಸಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೇರಿಸಿದ್ದಾರೆ.
ಇದನ್ನೂ ಓದಿ : ರಾಮ್ ಪೋತಿನೇನಿ ನಟನೆಯ ‘ಡಬಲ್ ಇಸ್ಮಾರ್ಟ್’ ಚಿತ್ರದ ಮೂರನೇ ಸಾಂಗ್ ರಿಲೀಸ್..!