ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದಾಗಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದುವರೆದಿದೆ.
ಧಾರಾಕಾರ ಮಳೆಗೆ ಮಾನ್ಯತಾ ಟೆಕ್ ಪಾರ್ಕ್ ರಸ್ತೆಗಳು ಜಲಾವೃತಗೊಂಡಿದ್ದು, ಇಂದು ಬೆಳಗ್ಗೆಯಿಂದ ಸುರಿದ ಮಳೆಗೆ ರಸ್ತೆ ತುಂಬಾ ನೀರು ತುಂಬಿಕೊಂಡು ವಾಹನಗಳು ಅದರಲ್ಲಿ ಸಿಲುಕಿ ಸಂಚಾರಕ್ಕೆ ಸವಾರರು ಪರದಾಡುವಂತಾಯಿತು. ಯಮಲೂರು ವಿಂಗ್ ಟವರ್ ರಸ್ತೆ, ಯಮಲೂರು- ಬೆಳ್ಳಂದೂರು, ಕೊರಮಂಗಲ ಔಟರ್ ರಿಂಗ್ ರೋಡ್ ಸಂಪೂರ್ಣ ಜಲಾವೃತವಾಗಿದೆ.
ನಿನ್ನೆ ತಡರಾತ್ರಿಯಲ್ಲೂ ಕೂಡ ಮಳೆ ಸುರಿದು ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆ ಅನುಭವಿಸುವಂತಾಯಿತು. ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ನಾಳೆ(ಅಕ್ಟೋಬರ್ 16) ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಕಾಶಿನಾಥ್ ಪುತ್ರನ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್..!