Download Our App

Follow us

Home » Uncategorized » ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ – 98 ಮಂದಿಗೆ ಜೀವಾವಧಿ ಶಿಕ್ಷೆ..!

ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ – 98 ಮಂದಿಗೆ ಜೀವಾವಧಿ ಶಿಕ್ಷೆ..!

ಕೊಪ್ಪಳ : ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರೋಬ್ಬರಿ‌ 98 ಅಪರಾಧಿಗಳಿಗೆ ಜೀವಾವದಿ ಶಿಕ್ಷೆ ನೀಡಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

2014ರ ಆಗಸ್ಟ್ 28 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು 101 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದ್ದರು. ಇಂದು ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ಘೋಷಣೆ ಮಾಡಿದ್ದಾರೆ.

ಗಂಗಾವತಿ ನಗರದಲ್ಲಿ ಪವರ್ ಸಿನಿಮಾ ನೋಡಲು ಮಂಜುನಾಥ ಎಂಬಾತ ತನ್ನ ಸ್ನೇಹಿತರ ಜೊತೆ ಹೋಗಿದ್ದರು. ಮರಕುಂಬಿ ನಿವಾಸಿಯಾಗಿದ್ದ ಮಂಜುನಾಥ ಎಂಬಾತನ ಮೇಲೆ ಹಲ್ಲೆಯಾಗಿತ್ತು. ಬಳಿಕ ತಮ್ಮದೇ ಊರಿನ ದಲಿತರು ಹಲ್ಲೆ ಮಾಡಿಸಿದ್ದಾರೆ ಎಂದು ಮಂಜುನಾಥ ಗ್ರಾಮದ ಜನರಿಗೆ ಹೇಳಿದ್ದ. ಬಳಿಕ ಮಂಜುನಾಥನ ಪರವಾಗಿ ಗ್ರಾಮದ ಜನರು ದಲಿತರ ಮೇಲೆ ಹಲ್ಲೆ ಮಾಡಿದ್ದರು. ಅನೇಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿ, ಹಲ್ಲೆ ಮಾಡಲಾಗಿತ್ತು. ಈ ಕುರಿತು ಭೀಮೇಶ್ ಎಂಬುವವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದರು.

ಮಾತ್ರವಲ್ಲ ಮೂವರು ಆಪರಾಧಿಗಿಗೆ 5 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿದೆ. 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವದಿ ಶಿಕ್ಷೆ ಘೋಷಣೆ ಮಾಡಲಾಗಿದೆ. ಮಾತ್ರವಲ್ಲ ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ಕೂಡ ವಿಧಿಸಿದೆ.

ಇದನ್ನೂ ಓದಿ : ಪ್ರತಿಷ್ಠಿತ ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ಗೆ ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ..!

Leave a Comment

DG Ad

RELATED LATEST NEWS

Top Headlines

ಕನ್ನಡ ಚಿತ್ರ ನಿರ್ಮಾಪಕರಿಗೆ ವರದಾನ – ಸಿನಿ ಪ್ರಿಯರಿಗಾಗಿ ಬರ್ತಿದೆ ಹೊಸ ಒಟಿಟಿ ಪ್ಲಾಟ್‌ಫಾರ್ಮ್‌..!

ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುವವರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿತ್ರಪ್ರೇಮಿಗಳ ಬೇಡಿಕೆಗನುಗುಣವಾಗಿ, ಅವರನ್ನು ರಂಜಿಸಲು ಓಟಿಟಿ ಪ್ಲಾಟ್

Live Cricket

Add Your Heading Text Here