ಬೆಂಗಳೂರು : ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣ ಸಿಎಂ ಸಿದ್ದರಾಮಯ್ಯನವರ ಕುರ್ಚಿಗೆ ಕಂಟಕವಾಗಿ ಪರಿಣಮಿಸಿದೆ. ಇದೀಗ ಮುಡಾ ಹಗರಣದಲ್ಲಿ ಮೊದಲ ತಲೆದಂಡವಾಗಿದ್ದು, ಮರಿಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿನ್ನೆಯಷ್ಟೇ ಸಿಎಂ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದ್ದರು. ಸಿಎಂ ಸೂಚನೆ ಬೆನ್ನಲ್ಲೇ ಮರಿಗೌಡ ಅಧ್ಯಕ್ಷ ಸ್ಥಾನ ತೊರೆದಿದ್ದಾರೆ. ಈಗಾಗಲೇ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದಿಂದ (ಇಡಿ) ತನಿಖೆ ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿ ನೇಮಕ ಮಾಡಲಾಗುತ್ತಿದೆ. ಈ ಮುಡಾ ಸೈಟ್ ಹಗರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ED ಕೂಡಾ ಮುಡಾ ಸಂಬಂಧ ECIR ದಾಖಲಿಸಿತ್ತು.
ಬೆಂಗಳೂರಿನ ನಗರಾಭಿವೃದ್ಧಿ ಇಲಾಖೆಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಸೈಟ್ ವಿವಾದ ನಡೆಯುತ್ತಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಬಂದಿತ್ತು.
ಇದನ್ನೂ ಓದಿ : ಬೆಂಗಳೂರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗಿಫ್ಟ್ - ‘ಕಾವೇರಿ 5ನೇ ಹಂತ’ದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ..!