Download Our App

Follow us

Home » ಸಿನಿಮಾ » ‘ಮಾರ್ನಮಿ’ ಚಿತ್ರದ ಟೀಸರ್ ರಿಲೀಸ್​​ – ಕರಾವಳಿ ಪ್ರೇಮಕಥೆಯಲ್ಲಿ ರಿತ್ವಿಕ್-ಚೈತ್ರಾ ಜೆ. ಆಚಾರ್..!

‘ಮಾರ್ನಮಿ’ ಚಿತ್ರದ ಟೀಸರ್ ರಿಲೀಸ್​​ – ಕರಾವಳಿ ಪ್ರೇಮಕಥೆಯಲ್ಲಿ ರಿತ್ವಿಕ್-ಚೈತ್ರಾ ಜೆ. ಆಚಾರ್..!

ರಿತ್ವಿಕ್ ಮಠದ್​​ ಹಾಗೂ ಚೈತ್ರಾ ಜೆ. ಆಚಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಮಾರ್ನಮಿ ಚಿತ್ರದ ಟೈಟಲ್, ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ಬೆಂಗಳೂರಿನ ಎಸ್.ಆರ್.ವಿ ಥಿಯೇಟರ್​​​ನಲ್ಲಿ ನಡೆಯಿತು. ಪಿಂಗಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರೀತಂ ಆರ್ ಶೆಟ್ಟಿ ಗರಡಿಯಲ್ಲಿ ನಿರ್ದೇಶನದ ಪಟ್ಟುಗಳನ್ನು ಕಲಿತಿರುವ ರಿಶಿತ್ ಶೆಟ್ಟಿ ಚೊಚ್ಚಲ ಪ್ರಯತ್ನವೇ ಈ ಮಾರ್ನಮಿ.

ಚಿತ್ರದ ಟೈಟಲ್ ಟೀಸರ್ ಗುನಾಧ್ಯ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನೆಲ್ ಬಿಡುಗಡೆಯಾಗಿದ್ದು, ಟೀಸರ್ ಪ್ರಾಮಿಸಿಂಗ್ ಆಗಿದೆ. ಕರಾವಳಿ ಭಾಗದ ಹುಲಿವೇಷದ ಹಿನ್ನೆಲೆ ಹಾಗೂ ಹುಲಿವೇಷ ಸಂಸ್ಕೃತಿಯ ಎಳೆ ಚಿತ್ರದಲ್ಲಿ ಇರಲಿದೆ. ಚೆಂದದ ಲವ್ ಸ್ಟೋರಿ ಜೊತೆಗೆ ಆಕ್ಷನ್, ಎಮೋಷನ್,ಕಾಮಿಡಿ ಮಿಶ್ರಣದ ಮಾರ್ನಮಿ ಸಿನಿಮಾಗೆ ಗುನಾಧ್ಯ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಶಿಲ್ಪಾ ನಿಶಾಂತ್ ನಿರ್ಮಾಣ ಮಾಡುತ್ತಿದ್ದಾರೆ. ಅಕ್ಟೋಬರ್ ಒಂದರಿಂದ ಮಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ನಡೆಸಲು ಚಿತ್ರತಂಡ ಸಜ್ಜಾಗಿದೆ.

ಟೀಸರ್ ಬಿಡುಗಡೆ ಬಳಿಕ ಸಂಗೀತ ನಿರ್ದೇಶಕ ಚರಣ್ ರಾಜ್ ಮಾತನಾಡಿ, ತುಂಬಾ ಖುಷಿಯಾಗುತ್ತಿದೆ. ಹೊಸ ತಂಡ ಹೊಸ ನಿರ್ದೇಶಕರು. ಈ ತಂಡದಲ್ಲಿ ನನ್ನ ಅಚ್ಚುಮೆಚ್ಚಿನ ನಟರು ಎಲ್ಲಾ ಇದ್ದಾರೆ. ತುಂಬಾ ಒಳ್ಳೆ ಕಥೆ. ನನಗೂ ಒಳ್ಳೆ ಅವಕಾಶ ಇದೆ ಎನಿಸಿತು. ನನಗೂ ಅವಕಾಶ ಪಡೆದುಕೊಂಡಿದ್ದೇನೆ. ಸಂಗೀತದ ಕೆಲಸ ಶುರು ಮಾಡಿದ್ದೇವೆ. ಟೈಟಲ್ ಟೀಸರ್ ಮಾಡಿದ್ದೇವೆ. ಹಾಡುಗಳ ಕಂಪೋಸ್ ಮಾಡಲು ಶುರು ಮಾಡಿದ್ದೇವೆ. ಇಷ್ಟೇ ಸಾಂಗ್ ಇದೆ ಅಂತಾ ಡಿಸೈಡ್ ಮಾಡಿಲ್ಲ. ಆದರೆ ಐದು ಹಾಡುಗಳು ಇರುತ್ತವೆ ಎಂದರು.

ಚಿತ್ರದ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ ರಿಶಿತ್ ಶೆಟ್ಟಿ , ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್, ಅಸೋಸಿಯೆಟ್ ಆಗಿ ರೈಟರ್ ಆಗಿ ಕೆಲಸ ಮಾಡಿದ್ದೇನೆ. ಪ್ರೀತಂ ಶೆಟ್ಟಿ ಅವರ ಜೊತೆ ಒಂದಷ್ಟು ಚಿತ್ರಗಳಿಗೆ ಕೆಲಸ ಮಾಡಿದ್ದೇನೆ. ಮಂಗಳೂರಲ್ಲಿ ಸ್ಕ್ರಿಪ್ಟ್ ಕೆಲಸಕ್ಕೆ ಹೋಗಿದ್ದಾಗ ಸುಧಿ ಪರಿಚಯವಾಗಿದ್ದು. ಅವರು ಒಂದು ಕಥೆ ಮಾಡಿಕೊಂಡಿದ್ದರು. ಅವರು ಡೈರೆಕ್ಷನ್ ಮಾಡಲು ಇಷ್ಟಇಲ್ಲ ಅಂದಾಗ ನಾನು ಕಥೆ ಕೇಳಿದೆ. ಅವರು ಪ್ರೀತಿಯಿಂದ  ಕೊಟ್ಟರು. ರಿತ್ವಿಕ್ ಅವರಿಗೆ ಹೇಳಿದೆ. ಅವರು ಇದಕ್ಕೆ ಏನೋ ಬೇಕೋ ಅನಿಸುತ್ತಿದೆ ಎಂದರು. ಬಳಿಕ 6 ತಿಂಗಳ ವರ್ಕ್ ಮಾಡಿಕೊಂಡು ಅವರ ಬಳಿ ಹೋದೆ. ಅವರು ಕಥೆ ಕೇಳಿ ಖುಷಿಪಟ್ಟರು. ಬಳಿಕ ಪ್ರೊಡ್ಯೂಸರ್ ಹುಡುಕಾಟದಲ್ಲಿ ನಿಶಾಂತ್ ಸರ್ ಭೇಟಿಯಾದರು. ಆ ಬಳಿಕ ಟೈಟಲ್ ಟೀಸರ್ ಮಾಡಿಕೊಂಡು ಬಂದೆವು. ಆ ಬಳಿಕ ನಿರ್ಮಾಪಕರು ಇಷ್ಟಪಟ್ಟರು. ಚಿತ್ರದ ಪ್ರತಿ ಹಂತದಲ್ಲಿ ನಿಶಾಂತ್ ಸರ್ ಸಹಕಾರ ಕೊಟ್ಟಿದ್ದಾರೆ ಎಂದರು.

ಬಳಿಕ ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ ನಟ ರಿತ್ವಿಕ್ ಅವರು , ಈ ಚಿತ್ರದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಒಂದು ಕಥೆ. ಚೆನ್ನಾಗಿ ಎಳೆದುಕೊಂಡು ಬಂದಿದ್ದು ರಿಶಿತ್ ಶೆಟ್ಟಿ. ನಮಗೆ ಬೇಕು ಅಂದಿದೆಲ್ಲ ಕೊಡುತ್ತಿರುವುದು, ನಮಗೆ ಸಪೋರ್ಟ್ ಮಾಡುತ್ತಿರುವುದು ನಿರ್ಮಾಪಕ ನಿಶಾಂತ್ ಸರ್. ಇಂತಹ ನಿರ್ಮಾಪಕರು ಅಪರೂಪ. ಈ ರೀತಿ ನಿರ್ಮಾಪಕರು ಇಂಡಸ್ಟ್ರೀಗೆ ಸಿಗಬೇಕು. ಇವರು ಗೆದ್ದರೆ ಮತ್ತಷ್ಟು ಸಿನಿಮಾಗಳು ಮಾಡುತ್ತಾರೆ. ಕಥೆ ಚೆನ್ನಾಗಿದೆ. ಕರಾವಳಿ ಭಾಗದಲ್ಲಿ ನಡೆಯುವ ಅದ್ಭುತ ಲವ್ ಸ್ಟೋರಿ. ದಸರಾ ದಿನವನ್ನು ಮಾರ್ನಮಿ ಎಂದು ಕರೆಯುತ್ತಾರೆ. ಚಿತ್ರದಲ್ಲಿ ಒಳ್ಳೆ ಸ್ಟಾರ್ ಕ್ಯಾಸ್ಟ್ ಇದೆ. ಅದ್ಭುತ ತಾಂತ್ರಿಕ ವರ್ಗ ಇದೆ ಎಂದು ಮಾಹಿತಿ ಹಂಚಿಕೊಂಡರು.

ನಾಯಕಿ ಚೈತ್ರಾ ಆಚಾರ್ ಮಾತನಾಡಿ, ಕಥೆ ಬಹಳ ಇಷ್ಟವಾಯ್ತು. ಡೇಟ್ ಸಮಸ್ಯೆ ಇದೆ ಆಗಲ್ಲ ಎಂದೆ. ಮತ್ತೆ ಕಥೆ ನನ್ನ ಬಳಿಯೇ ಬಂತು. ಡೇಟ್ಸ್ ಅಡ್ಜಸ್ಟ್ ಮಾಡಿಕೊಳ್ಳೋಣಾ ಎಂದರು. ಅದ್ಭುತ ಕಥೆ. ಟೆಕ್ನಿಕಲ್ ಆಗಿ ಚಿತ್ರ ಸ್ಟ್ರಾಂಗ್ ಇದೆ. ರಿಷಿತ್ ಕಥೆ ಹೇಳಲು ಬಂದಾಗ ಎಲ್ಲಿಯೂ ಬೋರ್ ಆಗಲಿಲ್ಲ. ಇಷ್ಟು ಬೇಗ ಮುಗಿಯಿತಾ ಅನಿಸಿತು. ರಿತ್ವಿಕ್ ಅವರ ಜೊತೆ ಕೆಲಸ ಮಾಡಲು ಖುಷಿ ಇದೆ. ಕಥೆ ನಂಬಿದ್ದೇವೆ, ಚರಣ್ ರಾಜ್ ಅವರ ಮ್ಯೂಸಿಕ್ ಇದೆ. ನಾನು ಶೂಟಿಂಗ್ ಗೆ ಹೊರಡಲು ಎಕ್ಸೈಟ್ ಆಗಿದ್ದೇನೆ ಎಂದರು.

‘ಮಾರ್ನಮಿ’ ಸಿನಿಮಾದಲ್ಲಿ ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಪ್ರಕಾಶ್ ತುಮಿನಾಡು, ಸೋನು ಗೌಡ, ಜ್ಯೋತೀಶ್ ಶೆಟ್ಟಿ, ರೋಚಿತ್, ಯಶ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರ ಶೆಟ್ಟಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನವಿದ್ದು, ಶಿವಸೇನ ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ.

ಇನ್ನು ವಿಭಿನ್ನ ಕಂಟೆಂಟ್​​ ಸುಳಿವಿನ ಮೂಲಕವೇ ಸದ್ದು ಮಾಡೋ ಸಿನಿಮಾಗಳು ಗೆದ್ದು ಬೀಗಿದ ಅನೇಕ ಉದಾಹರಣೆಗಳಿವೆ. ಇದೀಗ ಈ ಸಾಲಿಗೆ ಮಾರ್ನಮಿ ಚಿತ್ರ ಕೂಡ ಸೇರ್ಪಡೆಗೊಳ್ಳುವ ಸ್ಪಷ್ಟ ಲಕ್ಷಣಗಳು ಕಾಣಿಸುತ್ತಿದೆ.

ಇದನ್ನೂ ಓದಿ : ಸಿನಿಮಾ ಹೆಸರಿನಲ್ಲಿ 40 ಲಕ್ಷ ರೂ. ಪಡೆದು ಹನಿಟ್ರ್ಯಾಪ್ ಮಾಡಿದ ಗ್ಯಾಂಗ್​ ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here