ಚಂದನವನದ ಮೋಸ್ಟ್ ಎಲಿಜಬಲ್ ಬ್ಯಾಚುಲರ್.. ದಶಕಗಳಿಗೂ ಹೆಚ್ಚು ಕಾಲ ಪಡ್ಡೆ ಹುಡುಗರ ಹಾಟ್ ಫೇವರಿಟ್ ನಟಿ ಅಂದ್ರೆ ಅದು ಮೋಹಕ ತಾರೆ ರಮ್ಯಾ. ರಮ್ಯಾ ಅವರು ಕೇವಲ ಸಿನಿಮಾ ರಂಗದಲ್ಲಿ ಅಷ್ಟೇ ಅಲ್ಲ ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. 2013ರಲ್ಲಿ ರಮ್ಯಾ ಮಂಡ್ಯದಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಸ್ಯಾಂಡಲ್‌ವುಡ್ ಮೋಹಕ ತಾರೆ ಅಂತನೇ ಫೇಮಸ್ ಆಗಿರೋ ರಮ್ಯಾ ಅವರ ಮತ್ತೊಂದು ಹೆಸರು ದಿವ್ಯಾ ಸ್ಪಂದನಾ. ರಮ್ಯಾ ಅವರಿಗೆ ಇಂಟರ್ನೆಟ್‌ನಲ್ಲಿರುವ ಮಾಹಿತಿ ಪ್ರಕಾರ ಈಗ 41 ವರ್ಷ ವಯಸ್ಸು. ಪುನೀತ್ ರಾಜ್‌ಕುಮಾರ್ ಅಭಿನಯದ ಅಭಿ ಚಿತ್ರದ ಮೂಲಕ 2003ರಲ್ಲಿ ರಮ್ಯಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಮ್ಯಾ, ಈವರೆಗೆ ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ್ದಾರೆ.
ಸದ್ಯ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಸ್ಯಾಂಡಲ್‌ವುಡ್ ಕ್ವೀನ್ ನಟಿ ರಮ್ಯಾಗೆ ಕೊನೆಗೂ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ. ನಟಿ ರಮ್ಯಾ ಅವರು ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಿದ್ಧತೆ ನಡೆಸಿದ್ದಾರೆ ಎನ್ನುವ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ನಟಿ ರಮ್ಯಾ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ಇಷ್ಟರಲ್ಲೇ ನಡೆಯಲಿದೆ ಎನ್ನಲಾಗಿದ್ದು, ನವೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ.
ನಟಿ ರಮ್ಯಾ ಅವರು ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಆದರೆ ಆ ಉದ್ಯಮಿ ಯಾರು ಅನ್ನೋ ಗುಟ್ಟನ್ನು ಇನ್ನೂ ಬಿಟ್ಟು ಕೊಟ್ಟಿಲ್ಲ. ಇನ್ನು ಮದುವೆ ಬಗ್ಗೆ ಗಾಸಿಪ್ ಹಬ್ಬಿದ ಬೆನ್ನಲ್ಲೇ ಇಂದು ದಿಢೀರ್ ಆಗಿ ನಟಿ ರಮ್ಯಾ ಅವರು ಸುದ್ದಿಗೋಷ್ಠಿ ಕರೆದಿದ್ದು, ಸುದ್ದಿಗೋಷ್ಠಿಯಲ್ಲೇ ರಮ್ಯಾ ಮದುವೆ ವದಂತಿ ಬಗ್ಗೆ ಸ್ಪಷ್ಟನೆ ಕೊಡ್ತಾರಾ? ಮದುವೆ ಆಗ್ತಿರುವುದು ನಿಜಾನಾ? ಸುಳ್ಳಾ? ಎಂಬೆಲ್ಲಾ ಮಾಹಿತಿಯನ್ನು ಬಹಿರಂಗ ಪಡಿಸಲಿದ್ದಾರೆ.
ಇದನ್ನೂ ಓದಿ : ಇಂದು ದರ್ಶನ್ ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಅಂತ್ಯ – ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ..!