ಹಾವೇರಿ : ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ಅಂಗಡಿಗಳು ಧಗಧಗನೆ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ 5ಕ್ಕೂ ಅಧಿಕ ಅಂಗಡಿಗಳು ಸುಟ್ಟ ಭಸ್ಮವಾಗಿದೆ. ಇಲೆಕ್ಟ್ರಿಕಲ್ ಅಂಗಡಿ, ಬೇಕರಿ, ಗೋಬಿ ಅಂಗಡಿ, ಪುಟ್ವೇರ್ ಅಂಗಡಿ, ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸುಮಾರು 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರೇಕೆರೂರು ಶಾಸಕ ಯುಬಿ ಬಣಕಾರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಮೇಜರ್ ಟ್ವಿಸ್ಟ್ – ಸಚಿವ ಶರಣಪ್ರಕಾಶ್ ಪಾಟೀಲ್ಗೂ ಇದ್ಯಾ ಹಗರಣದ ನಂಟು?
Post Views: 215