ಬೆಂಗಳೂರು : ಮೂಡಾ ಕೇಸಲ್ಲಿ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ಸಂಪುಟದ ಮತ್ತೊಬ್ಬ ಸಚಿವರಿಗೆ ಪ್ರಾಸಿಕ್ಯೂಷನ್ ಭೀತಿ ಶುರುವಾಗಿದೆ. ಕೈಗಾರಿಕಾ ಸಚಿವ M.B ಪಾಟೀಲ್ ವಿರುದ್ಧ KIADB ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಇದ್ದು, ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.
BNSS ಸೆಕ್ಷನ್ 218 ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17a. ಸೆಕ್ಷನ್ 19ರ ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮನವಿ ಸಲ್ಲಿಸಿದ್ದಾರೆ.
ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಅಕ್ರಮ ಹಂಚಿಕೆ ಆರೋಪ ಇದೆ. ಕೈಗಾರಿಕಾ ಪ್ರದೇಶದ ಸಿಎ ನಿವೇಶನ ನಿಯಮಬಾಹಿರವಾಗಿ ಹಂಚಿದ್ದಾರೆ ಎಂದು ಆರೋಪ ಮಾಡಲಾಗಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ ಕೋಟಿ ಕೋಟಿ ನಷ್ಟವಾಗಿದೆ ಎನ್ನಲಾಗ್ತಿದೆ.
ಇದನ್ನೂ ಓದಿ : ನಮ್ಮ ಬೆಂಬಲ ನಿಮಗಿದೆ ಧೈರ್ಯವಾಗಿರಿ – ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್..!