ರಾಯಚೂರು : ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್ನಲ್ಲೇ ಹೊಡೆದಾಡಿದ ಘಟನೆ ರಾಯಚೂರಿನ ನವೋದಯ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಘಟನೆಯ ಪರಿಣಾಮ ಒಬ್ಬ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ನಿನ್ನೆ ರಾಯಚೂರಿನ ನವೋದಯ ಮೆಡಿಕಲ್ ಕಾಲೇಜ್ನಲ್ಲಿ ರೀಗೇಲ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿ ಮುಗಿಸಿಕೊಂಡು ಬಂದ ಬಳಿಕ ಮದ್ಯದ ಅಮಲಿನಲ್ಲಿ ಸ್ಟೂಡೆಂಟ್ಸ್ ಗಳ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ದೊಣ್ಣೆ ಹಿಡಿದುಕೊಂಡು ವಿದ್ಯಾರ್ಥಿಗಳು ತಡರಾತ್ರಿ ಬಡಿದಾಡಿಕೊಂಡಿದ್ದಾರೆ.
ವಿದ್ಯಾರ್ಥಿಗಳು ದೊಣ್ಣೆ ಹಿಡಿದುಕೊಂಡು ಬಡಿದಾಡಿಕೊಂಡ ಪರಿಣಾಮ ಒಬ್ಬ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ತಲೆಗೆ ಪೆಟ್ಟು ಬಿದ್ದ ವಿದ್ಯಾರ್ಥಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ತಡರಾತ್ರಿ ನಡೆದ ಮೆಡಿಕಲ್ ವಿದ್ಯಾರ್ಥಿಗಳ ಗಲಾಟೆಯಿಂದ ಸಾರ್ವಜನಿಕರಲ್ಲಿ ಆತಂಕಗೊಂಡಿದ್ದಾರೆ.
ಇದನ್ನೂ ಓದಿ : ರಂಗೇರಿದ ಹಾಸನ ಚುನಾವಣಾ ಅಖಾಡ- ಮೊಮ್ಮಗನನ್ನು ಗೆಲ್ಲಿಸಲು ಅಖಾಡಕ್ಕಿಳಿದ ದೇವೇಗೌಡರು..!