ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಅ.30ರಂದು ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಹಿನ್ನೆಲೆ ರಿಲೀಸ್ ಆಗಿದ್ದಾರೆ. 5 ತಿಂಗಳ ಜೈಲುವಾಸದ ಬಳಿಕ ಮನೆಗೆ ಬಂದಿರುವ ಮಗನನ್ನು ನೋಡಲು ತಾಯಿ ಮೀನಾ ತೂಗುದೀಪ ಆಗಮಿಸಿದ್ದಾರೆ.
ವಿಜಯಲಕ್ಷ್ಮಿ ನೆಲೆಸಿರುವ ಹೊಸಕೆರೆಹಳ್ಳಿಯ ಅಪಾರ್ಟ್‌ಮೆಂಟ್‌ಗೆ ಮೊಮ್ಮಗ ಚಂದನ್ ಜೊತೆ ಮಗನನ್ನು ನೋಡಲು ಮೈಸೂರಿನಿಂದ ಆಗಮಿಸಿದ್ದಾರೆ. ದೀಪಾವಳಿ ಹಬ್ಬ, ಮೊಮ್ಮಗ ವಿನೀಶ್ ಹುಟ್ಟುಹಬ್ಬವನ್ನು ಆಚರಿಸುವುದರ ಜೊತೆಗೆ ಮಗ ದರ್ಶನ್‌ನನ್ನು ನೋಡಿ ಮೀನಾ ಖುಷಿ ಪಟ್ಟಿದ್ದಾರೆ. ಇದೇ ವೇಳೆ, ಅಪಾರ್ಟ್‌ಮೆಂಟ್ ಬಳಿ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಫ್ಯಾನ್ಸ್ ಜಮಾಯಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ ಜೂನ್ 11 ರಂದು ನಟ ದರ್ಶನ್ ಬಂಧನವಾಗಿದ್ದು, ಮೊದಲಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ನಂತರ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಆರೋಪಿಗಳಾಗಿದ್ದಾರೆ. ಸದ್ಯ ಪವಿತ್ರಾ ಬೆಂಗಳೂರಿನ ಜೈಲಿನಲ್ಲಿ ಮತ್ತು ಇತರರು ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ. ಅವರಲ್ಲಿ ಕೆಲವರು ಇತ್ತೀಚೆಗೆ ಜಾಮೀನು ಪಡೆದು ಜೈಲಿಂದ ಹೊರ ಬಂದಿದ್ದಾರೆ.
ಇದನ್ನೂ ಓದಿ : ಹಾಸನಾಂಬೆ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ..!