Download Our App

Follow us

Home » ಮೆಟ್ರೋ » ಪ್ರಯಾಣಿಕರಿಗೆ ಗುಡ್​ನ್ಯೂಸ್​ : ಇನ್ಮುಂದೆ ಪ್ರತಿ ಸೋಮವಾರ ಬೆಳಗ್ಗೆ 4:15ರಿಂದಲೇ ‘ನಮ್ಮ ಮೆಟ್ರೋ’ ಸೇವೆ ಆರಂಭ!

ಪ್ರಯಾಣಿಕರಿಗೆ ಗುಡ್​ನ್ಯೂಸ್​ : ಇನ್ಮುಂದೆ ಪ್ರತಿ ಸೋಮವಾರ ಬೆಳಗ್ಗೆ 4:15ರಿಂದಲೇ ‘ನಮ್ಮ ಮೆಟ್ರೋ’ ಸೇವೆ ಆರಂಭ!

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ಬೆಂಗಳೂರರಿಗೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಬೇಗ ಸಂಪರ್ಕವನ್ನು ಒದಗಿಸುವ ಹಿನ್ನೆಲೆ ಮೆಟ್ರೋ ಸಂಚಾರ ಸಮಯದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಇನ್ಮುಂದೆ ಪ್ರತಿ ಸೋಮವಾರ ಮಾತ್ರ (ಜನವರಿ 13ರಿಂದ) ಮೆಟ್ರೋ ಸೇವೆ ಮುಂಜಾನೆ ಬೆಳಗ್ಗೆ 4.15ರಿಂಲದೇ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಹೌದು.. ಇನ್ಮುಂದೆ ಪ್ರತಿ ಸೋಮವಾರದಂದು ಮೆಟ್ರೋ ಸಂಚಾರ ಬೆಳಗ್ಗೆ 4.15ರಿಂದ ಆರಂಭವಾಗಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್ ಸಂಸ್ಥೆಯು ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ. ಈ ಹಿನ್ನೆಲೆಯಲ್ಲಿ, ನಮ್ಮ ಮೆಟ್ರೋ ನಿಗಮವು ಪ್ರತಿ ಸೋಮವಾರದಂದು ಮಾತ್ರ ಎಲ್ಲಾ ನಿಲ್ದಾಣಗಳಿಂದ ಮೆಟ್ರೋ ಸೇವೆಯನ್ನು 2025ರ ಜನವರಿ 13ರಿಂದ ಜಾರಿಗೆ ಬರುವಂತೆ ಬೆಳಗ್ಗೆ 4:15 ರಿಂದ ಪ್ರಾರಂಭಿಸಲಿದೆ.

ಸದ್ಯ ಮುಂಜಾನೆ 5:00 ಮೆಟ್ರೋ ಸೇವೆ ಆರಂಭವಾಗುತ್ತಿದ್ದು, ಅದನ್ನು ಸೋಮವಾರ ಮಾತ್ರ 45 ನಿಮಿಷ ಮುಂಚಿತವಾಗಿ ಆರಂಭಿಸಲಾಗುತ್ತಿದೆ. ಉಳಿದಂತೆ ವಾರದ ಉಳಿದ ಎಲ್ಲ ದಿನಗಳಂದು ಮೆಟ್ರೋ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉಳಿದ ದಿನಗಳಲ್ಲಿ ಎಂದಿನಂತೆ ಬೆಳಗ್ಗೆ 5 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

ಇನ್ನು ಮುಂದೆ ಪ್ರತಿ ಸೋಮವಾರ ಬೆಳಗ್ಗೆ ಬೆಂಗಳೂರು ನಗರಕ್ಕೆ ಬರುವ ಸಾರ್ವಜನಿಕರು 4.15ರಿಂದಲೇ ಮೆಟ್ರೋ ಸೇವೆಯನ್ನು ಪಡೆದುಕೊಳ್ಳಬಹುದು. ಮೆಟ್ರೋ ಮಾರ್ಗದ ನಾಲ್ಕು ಡಿಪೋಗಳಿಂದ ಬೆಳಗ್ಗೆಯೇ ಮೆಟ್ರೋ ಸೇವೆ ಆರಂಭವಾಗಲಿದೆ. ಸಾರ್ವಜನಿಕರು ತಮ್ಮ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ. ಈ ಸಮಯ ಬದಲಾವಣೆಯಿಂದ ಪ್ರಯಾಣಿಕರಿಗೆ ಅನುಕೂಲ ಹಾಗೂ ಟ್ರಾಫಿಕ್ ದಟ್ಟಣೆ ಸಹ ಕಡಿಮೆಯಾಗಲಿದೆ. ಕಚೇರಿಗೆ, ಶಾಲಾ, ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ತೆರಳಬಹುದಾಗಿದೆ.

ಇದನ್ನೂ ಓದಿ : ಚಾಮರಾಜನಗರ ಬಳಿಕ ಗುಜರಾತ್‌ನಲ್ಲಿ ದುರಂತ – 3ನೇ ಕ್ಲಾಸ್ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ.. ದೃಶ್ಯ ಸೆರೆ!

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here