ಬೆಂಗಳೂರು : ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಭಾನುವಾರ ಅಂದರೆ (ಫೆ.11) ಎರಡೂ ಗಂಟೆ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ನಮ್ಮ ಮೆಟ್ರೋ ಬೆಳಗ್ಗೆ 7 ಗಂಟೆಯಿಂದ ಎಂದಿನಂತೆ ಸಂಚರಿಸು್ತತವೆ.ಆದ್ರೆ, ಬೆಳಗ್ಗೆ 9 ಗಂಟೆಯ ನಂತರ ವೈಟ್ ಫೀಲ್ಡ್ (ಕಾಡುಗೋಡಿ) ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ.
ಇನ್ನು ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಚಲಿಸುತ್ತವೆ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ : ಈಶ್ವರಪ್ಪಗೆ ಕಡಿ, ಬಡಿ, ಕತ್ತರಿಸು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ.. RSS ಟ್ರೈನಿಂಗ್ ನೀಡಿದ್ದು ಇದೇನಾ? : ಸಿದ್ದರಾಮಯ್ಯ ಆಕ್ರೋಶ..!