Download Our App

Follow us

Home » ಮೆಟ್ರೋ » ಮೆಟ್ರೋ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಈ ಪ್ರಮುಖ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ನಿರ್ಬಂಧ..!

ಮೆಟ್ರೋ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಈ ಪ್ರಮುಖ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ನಿರ್ಬಂಧ..!

ಬೆಂಗಳೂರು : ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಇಂದಿನಿಂದ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗ ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ ನಡುವೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿದ BMRCL, ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲ ಕಲ್ಪಿಸಲು ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗಿನ ರಸ್ತೆಯಲ್ಲಿಒಂದು ವರ್ಷದವರೆಗೆ ವಾಹನ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಪ್ರಕಟಣೆಯಲ್ಲಿ ತಿಳಿಸಿದೆ.

ಪರ್ಯಾಯ ಮಾರ್ಗವೇನು? ಈ ಹಿನ್ನೆಲೆಯಲ್ಲಿ ಡೇರಿ ಸರ್ಕಲ್‌ ಕಡೆಯಿಂದ ಆನೆಪಾಳ್ಯ ಜಂಕ್ಷನ್‌ ಕಡೆಗೆ ಸಂಚರಿಸುವ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲ ತಿರುವು ಪಡೆದು, ಬಾಷ್‌ ಲಿಂಕ್‌ ರಸ್ತೆ ಮೂಲಕ ಆಡುಗೋಡಿ ಸಿಗ್ನಲ್‌ ತಲುಪಿ ಎಡಕ್ಕೆ ತಿರುವು ಪಡೆಯಬೇಕು. ಆನೆಪಾಳ್ಯ ಜಂಕ್ಷನ್‌ನಿಂದ ಡೇರಿ ಸರ್ಕಲ್‌ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೇ ನಿರ್ಬಂಧವಿರುವುದಿಲ್ಲ. ಡೇರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್‌ ಗಾರ್ಡನ್‌ನ 7ನೇ ಮುಖ್ಯರಸ್ತೆಯಲ್ಲಿ ಎಡಕ್ಕೆ ತಿರುವು ಪಡೆದು ಸಂಚರಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ : ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ ಪಿಜಿಯಲ್ಲಿ

Live Cricket

Add Your Heading Text Here