Download Our App

Follow us

Home » ರಾಜ್ಯ » ಇಂದು ರಾತ್ರಿಯೇ ರಾಜ್ಯಕ್ಕೆ ಆಗಮಿಸಲಿದ್ದಾರೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ..!

ಇಂದು ರಾತ್ರಿಯೇ ರಾಜ್ಯಕ್ಕೆ ಆಗಮಿಸಲಿದ್ದಾರೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ..!

ಮೈಸೂರು : ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೂ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ ಎನ್ನಲಾಗ್ತಿದೆ.

ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಮಾಡಲಿದ್ದು, ಅದಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಶನಿವಾರ (ಫೆ10) ರಾತ್ರಿ 10.55ಕ್ಕೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್‌ ಶಾ, ನಂತರ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಫೆ.11ರ ಬೆಳಗ್ಗೆ 11ಕ್ಕೆ ಚಾಮುಂಡಿ ಬೆಟ್ಟಕ್ಕೆ ತೆರಳುವ ಅವರು ನಂತರ ಮಧ್ಯಾಹ್ನ 12 ಗಂಟೆಗೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌, ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2.35ಕ್ಕೆ ನಗರದ ರಾಡಿಸನ್ ಬ್ಲೂ ಹೋಟೆಲ್​ನಲ್ಲಿ ಸಭೆಯಲ್ಲಿ ಭಾಗವಹಿಸಲಿರುವ ಅಮಿತ್‌ ಶಾ, ಸಂಜೆ 4.55ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ದೆಹಲಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅವರ ಆಗಮನ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಬಳ್ಳಾರಿ ಕಾಂಗ್ರೆಸ್​ ಶಾಸಕ ನಾ.ರಾ ಭರತ್ ರೆಡ್ಡಿ ನಿವಾಸದ ಮೇಲೆ ಐಟಿ ದಾಳಿ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಸುರಪುರ ಕಾಂಗ್ರೆಸ್ MLA ರಾಜಾ ವೆಂಕಟಪ್ಪ ನಾಯಕ್ ವಿಧಿವಶ..!

ಯಾದಗಿರಿ : ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 67 ವರ್ಷದ ಶಾಸಕ ರಾಜಾ ವೆಂಕಟಪ್ಪ

Live Cricket

Add Your Heading Text Here