ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ಪಾತ್ರಯಿದೆ ಎಂದು ಕೇಳಿಬಂದಿದೆ. ಈ ಹಿನ್ನೆಲೆಯಿಂದಾಗಿ ರಾಜ್ಯಾದ್ಯಂತ ಸಚಿವ ನಾಗೇಂದ್ರ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಈ ಮಧ್ಯೆ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರೊಟೆಸ್ಟ್ ನಡೆಸಿದೆ. ಇದೀಗ ಯಾವುದೇ ಕ್ಷಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಬಿಟಿವಿಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಸಿಎಂ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ನಾಗೇಂದ್ರ ರಿಸೈನ್ ನೀಡಲಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ನಾಗೇಂದ್ರಗೆ ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ದಾರೆ.
CID ಪ್ರಾಥಮಿಕ ತನಿಖೆಯಲ್ಲಿ ಸಚಿವರ ಪಾತ್ರ ಇರೋ ಬಗ್ಗೆ ಮಾಹಿತಿ ಲಭ್ಯವಾಗಿದ್ದು, 94 ಕೋಟಿ ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರ ಪಾತ್ರ ಬಯಲಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಸಚಿವ ನಾಗೇಂದ್ರಗೆ ರಾಜೀನಾಮೆ ನೀಡುವಂತೆ ಸೂಚನೆ ಕೊಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಫಾರಿನ್ನಿಂದ್ಲೇ ಜಾಮೀನು ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ..!