Download Our App

Follow us

Home » Uncategorized » ಮಂಗಳೂರಿನ ದೈವಸ್ಥಾನದಲ್ಲಿ ಹುಲಿ ಹೆಜ್ಜೆಯ ಪವಾಡ..!

ಮಂಗಳೂರಿನ ದೈವಸ್ಥಾನದಲ್ಲಿ ಹುಲಿ ಹೆಜ್ಜೆಯ ಪವಾಡ..!

ಮಂಗಳೂರು : ಇದು ತುಳುನಾಡಿನ ದೈವಾರಾಧನೆಯ ಮತ್ತೊಂದು ರೋಚಕ ಕಥೆ. ಎರಡೇ ತಿಂಗಳಲ್ಲಿ ದೈವದ ಮತ್ತೊಂದು ಪವಾಡ ನಡೆದಿದೆ. ಒರಿಸ್ಸಾದ ಮುಸ್ಲಿಂ ಯುವಕನ ಮೈ ಮೇಲೆ ಪಿಲಿಚಾಮುಂಡಿ ದೈವದ ಆವೇಶ ಬಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪೆರ್ಮುದೆಯ ಕಾಯಾರ್ ಕಟ್ಟೆಯಲ್ಲಿ ನಡೆದಿತ್ತು. ಅದರಂತೆ ನೇಮೋತ್ಸವಕ್ಕೆ ತಯಾರಿ ನಡೆಸುತ್ತಿದ್ದಾಗ ದೈವಸ್ಥಾನದಲ್ಲಿ ಹುಲಿ (ಪಿಲಿಚಾಮುಂಡಿ) ಹೆಜ್ಜೆ ಪತ್ತೆಯಾಗಿದೆ.

ದೈವಸ್ಥಾನದಲ್ಲಿ ಪತ್ತೆಯಾದ ಹುಲಿಯ ಹೆಜ್ಜೆ
ದೈವಸ್ಥಾನದಲ್ಲಿ ಪತ್ತೆಯಾದ ಹುಲಿಯ ಹೆಜ್ಜೆ

 

ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ ನಿರ್ಮಿಸುವ ಸಂದರ್ಭ ಒರಿಸ್ಸಾ ಮೂಲದ ಯುವಕನ ಮೈಮೇಲೆ ಪಿಲಿಚಾಮುಂಡಿ ಆವೇಶ ಬಂದು ಮುನಿಸು ತೋರಿತ್ತು.

ದೈವದ ಮುನಿಸಿನ ಬೆನ್ನಲ್ಲೇ ಪ್ರಶ್ನೆ ಇಟ್ಟಾಗ ಪಾಳುಬಿದ್ದ ದೈವಸ್ಥಾನ ಹಾಗೂ ನೇಮೋತ್ಸವ ಸ್ಥಗಿತಗೊಳಿಸಿದ್ದು ಕಾಣಿಸಿದೆ.ಹೀಗಾಗಿ ಪೆರ್ಮುದೆಯ ಕಾಯಾರ್ ಕಟ್ಟೆಯಲ್ಲಿ 18 ವರ್ಷಗಳ ಬಳಿಕ ದೈವದ ನೇಮೋತ್ಸವಕ್ಕೆ ತಯಾರಿ ನಡೆಸಲಾಗುತ್ತಿದೆ.

ಪಾಳು ಬಿದ್ದಿದ್ದ ಪಿಲಿಚಾಮುಂಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ. ಜ.4 ರಂದು ನೇಮೋತ್ಸವ ನಡೆಯಲಿದ್ದು, ಎರಡೇ ತಿಂಗಳಲ್ಲಿ ದೈವಸ್ಥಾನಕ್ಕೆ ದ್ವಾರ, ಮೆಟ್ಟಿಲು ನಿರ್ಮಾಣ ಮಾಡಲಾಗಿದೆ.

  • ದೈವಸ್ಥಾನದಲ್ಲಿ ಹುಲಿ ಹೆಜ್ಜೆಯ ಪವಾಡ :

ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಹುಲಿ ಹೆಜ್ಜೆಯ ಪವಾಡವೂ ನಡೆದಿದೆ. ಕಾಮಗಾರಿ ಹೊತ್ತಲ್ಲಿ ಪವಾಡ ಕಂಡು ದೈವಾರಧಕರಲ್ಲಿ ಅಚ್ಚರಿ ವ್ಯಕ್ತವಾಗಿದೆ.

18 ವರ್ಷಗಳಿಂದ ದೈವಾರಧನೆ ಸ್ಥಗಿತಗೊಂಡ ಜಾಗದಲ್ಲಿ ಇರುವಿಕೆ ತೋರಿಸಿತಾ ಪಿಲಿಚಾಮುಂಡಿ ದೈವ ಎನ್ನುವ ಮಾತುಗಳು ಕೇಳಿಬರುತ್ತಿವೆ. ಪೆರ್ಮುದೆಯ ಕಾಯರ್ ಕಟ್ಟೆಯಲ್ಲಿರುವ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಪತ್ತೆಯಾದ ಹುಲಿ ಹೆಜ್ಜೆಹೌದು, ಪಿಲಿಚಾಮುಂಡಿ ದೈವದ ಜೊತೆಗೆ ನಂಟು ಹೊಂದಿರುವ ಹುಲಿಯ ಹೆಜ್ಜೆ ದೈವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಪತ್ತೆಯಾಗಿದೆ. ಸ್ಥಳೀಯ ಯುವಕರು ಕೆಲಸ ಮಾಡುತ್ತಿದ್ದಾಗ ದೈವಸ್ಥಾನದ ಮೇಲೆ ಹಾಗೂ ಮಣ್ಣಿನಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ.

ಸಾರ್ವಜನಿಕವಾಗಿ ಕಾಣಸಿಗದೇ ಇದ್ದರೂ ದೈವಸ್ಥಾನದ ಜಾಗದಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದೆ.

ತುಳುವರು ಬಹಳ ನಂಬುಗೆಯಿಂದ ಪಿಲ್ಚಂಡಿ ಅಥವಾ ಪಿಲಿಚಾಮುಂಡಿ ಅಂತ ಕರೆಯುತ್ತಾರೆ. ಕನ್ನಡದಲ್ಲಿ ಇದನ್ನು ವ್ರಾಘ್ರ ಚಾಮುಂಡಿ ಅಂತಲೂ ಕರೆಯುತ್ತಾರೆ.

ಇದೀಗ ಕಾಯರ್ ಕಟ್ಟೆಯಲ್ಲಿ ಹುಲಿ ಹೆಜ್ಜೆ ಗುರುತು ಕಂಡು ಭಕ್ತರು ಪುಳಕಿತರಾಗಿದ್ದಾರೆ. ತುಳುನಾಡಿನ ಲಕ್ಷಾಂತರ ಜನರ ಸಾವಿರ ವರ್ಷಗಳ ನಂಬಿಕೆಯ ಪ್ರತೀಕವೂ ಹೌದು.

ದೈವಸ್ಥಾನದ ಪಕ್ಕದಲ್ಲಿ ಎಂಆರ್​ಪಿಎಲ್ ಕಂಪನಿ ಇದ್ದು, ಮುಂಜಾಗ್ರತಾ ಕ್ರಮವಾಗಿ ಕಂಪನಿ ಸಮೀಪ ನೇಮೋತ್ಸವಕ್ಕೆ ಅವಕಾಶ ನೀಡುತ್ತಿರಲಿಲ್ಲ.

ಇದೀಗ ಮಾತುಕತೆ ನಂತರ ಕಂಪನಿಯು ನೇಮೋತ್ಸವ ನಡೆಸಲು ಅವಕಾಶ ಮಾಡಿಕೊಟ್ಟಿದ್ದು, ಗ್ರಾಮಸ್ಥರು ಮತ್ತು ಎಂಆರ್​ಪಿಎಲ್ ಸಹಕಾರದಲ್ಲಿ ಜ.4 ರಂದು ನೇಮೋತ್ಸವ ನಡೆಯಲಿದೆ.

ಇದನ್ನೂ ಓದಿ : ಬಸ್-ಟ್ರಕ್ ನಡುವೆ ಭೀಕರ ಅಪಘಾತ.. 12 ಮಂದಿ ಸಾ*ವು..!

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here