Download Our App

Follow us

Home » ರಾಜಕೀಯ » ನನಗೆ ಕೊಟ್ಟ ನಿಗಮದಲ್ಲಿ ತೃಪ್ತಿಯಿಂದ ಜನರ ಕೆಲಸ ‌ಮಾಡುತ್ತೇನೆ : ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ..!

ನನಗೆ ಕೊಟ್ಟ ನಿಗಮದಲ್ಲಿ ತೃಪ್ತಿಯಿಂದ ಜನರ ಕೆಲಸ ‌ಮಾಡುತ್ತೇನೆ : ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ..!

ಬೆಂಗಳೂರು : ಕರ್ನಾಟಕ ಸರ್ಕಾರ ನಿನ್ನೆ ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ. ಇದರಲ್ಲಿ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿಯವರಿಗೂ ಸರ್ಕಾರ ಕೆಯುಡಿಐಸಿ ಮತ್ತು ಎಫ್​ಸಿ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡಿದೆ. ಈ ಕುರಿತು ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿಯವರು ಇಂದು ಪ್ರತಿಕ್ರಿಯಿಸಿದ್ದಾರೆ.

ನನಗೆ ಸಿಎಂ ಹಾಗೂ ಡಿಸಿಎಂ, ಹೈಕಮಾಂಡ್ ನಾಯಕರು‌ ಕೆಯುಡಿಐಸಿ ಮತ್ತು ಎಫ್​ಸಿ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ಇವರಿಗೆ ನನ್ನ ಅಭಿನಂದನೆ ಸಲ್ಲಿಸುತ್ತೇನೆ, ನನಗೆ ಕೊಟ್ಟ ನಿಗಮದಲ್ಲಿ ಜನರ ಕೆಲಸ ‌ಮಾಡುತ್ತೇನೆ. ಜನರ ಪರವಾಗಿ ನಗರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ಹೇಳಿದ್ದಾರೆ.

ನನಗೆ ಯಾವುದೇ ಅಸಮಾಧಾನ ಇಲ್ಲ, ತೃಪ್ತಿಯಿಂದ ಕೆಲಸ ಮಾಡುತ್ತೇನೆ. ಕಾರ್ಯಕರ್ತರಿಗೆ ಕೂಡ ಶೀಘ್ರವಾಗಿ ನಿಗಮ ಮಂಡಳಿ ಹಂಚಿಕೆ ಮಾಡುತ್ತಾರೆ, ಅದಕ್ಕಾಗಿ ‌ಬೋರ್ಡ್ ಖಾಲಿ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ಶೆಟ್ಟರ್ ಮೂಲತಃ RSSನವ್ರು. ಅವ್ರು ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದಂತಹವರು. ಬಿಜೆಪಿಯಲ್ಲಿ ಅವರನ್ನು ಗಣನೆಗೆ ತೆಗೆದುಕೊಂಡಲ್ಲ ಎಂದು ಕಾಂಗ್ರೆಸ್ ಪಕ್ಷಕ್ಕೆ ಬಂದ್ರು, ಅವರು ಸೋತ್ರೂ ನಾವು ಅವರನ್ನು MLC ಮಾಡಿದ್ವಿ. ಈಗ ಯಾವುದೋ ಆಮಿಷಕ್ಕೊಳಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ಅವರು ಹೋಗಿದ್ದರಿಂದ ಕಾಂಗ್ರೆಸ್​ಗೆ ಯಾವುದೇ ನಷ್ಟನೂ ಇಲ್ಲ..ಲಾಭನೂ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಒತ್ತುವರಿ ಮಾಡಿ ಮನೆ ಕಟ್ಟಿದವ್ರಿಗೆ ಗುಡ್​ನ್ಯೂಸ್ – ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಮುಂದಾದ ಬಿಬಿಎಂಪಿ..!

Leave a Comment

DG Ad

RELATED LATEST NEWS

Top Headlines

ಚಿತ್ರದುರ್ಗದಲ್ಲಿ ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆಗಿರೋ ಖತರ್ನಾಕ್ ಕಳ್ಳರು..!

ಚಿತ್ರದುರ್ಗ : ಖಾಸಗಿ ಬಸ್​​ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಯಕನಹಟ್ಟಿ ಮೂಲದ SRE ಬಸ್ ಮಾಲೀಕ ಸಯ್ಯದ್

Live Cricket

Add Your Heading Text Here