Download Our App

Follow us

Home » ಅಪರಾಧ » ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ..!

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ..!

ಮಂಗಳೂರು : ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಪ್ರಕರಣ ಸಂಬಂಧ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹರೀಶ್ ಪೂಂಜಾ ಆಪ್ತರನ್ನು ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು. ಆರೋಪಿಯ ಬಂಧನ ಖಂಡಿಸಿ ಪೊಲೀಸ್ ಠಾಣೆ ಮುಂದೆ ಹರೀಶ್ ಪೂಂಜಾ ಪ್ರತಿಭಟನೆ ಮಾಡಿದ್ದರು. ಅಷ್ಟೆ ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ವಿರುದ್ದ ದಾಖಲಾಗಿದ್ದ ಎರಡು ಎಫ್ಐಆರ್ ಗಳನ್ನ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿ ವಿಚಾರಣೆ ವೇಳೆ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. ಪೊಲೀಸ್ ಸ್ಟೇಷನ್ ಮುಂದೆ ಪ್ರತಿಭಟನೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲಾಗಿದೆ.

ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠದಲ್ಲಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಶಾಸಕರ ಕ್ರಮಕ್ಕೆ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ ? ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಬದಲಾಗಿ ನ್ಯಾಯಾಲಯದ ಕೆಲಸ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ಕೋರ್ಟ್​ ಪ್ರಶ್ನಿಸಿದೆ.

ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ, ಪ್ರಸ್ತುತ ದಿನಗಳಲ್ಲಿ ಪೊಲೀಸರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ನೀವು ಠಾಣೆಗೆ ಹೋಗಬಾರದಾಗಿತ್ತು ಎಂದು ಹರೀಶ್ ಪೂಂಜಾಗೆ ತಿಳಿ ಹೇಳಿದ್ದಾರೆ. ವಾದ ಆಲಿಸಿದ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ. ಮುಂದಿನ ವಿಚಾರಣೆಯವರೆಗು ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗದಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್​ ರೇವಣ್ಣಗೆ ಬಿಗ್‌ ಶಾಕ್‌ – ಜೂ.6ರವರೆಗೆ SIT ಕಸ್ಟಡಿಗೆ ನೀಡಿದ ಕೋರ್ಟ್​..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here