Download Our App

Follow us

Home » ರಾಷ್ಟ್ರೀಯ » ಗಗನಯಾನ ಮಿಷನ್ ​​- ಭಾರತದಿಂದ ಬಾಹ್ಯಾಕಾಶಕ್ಕೆ ಹಾರಲಿರುವ 4 ಗಗನಯಾತ್ರಿಗಳ ಹೆಸರು ಘೋಷಿಸಿದ ಪ್ರಧಾನಿ ಮೋದಿ..!

ಗಗನಯಾನ ಮಿಷನ್ ​​- ಭಾರತದಿಂದ ಬಾಹ್ಯಾಕಾಶಕ್ಕೆ ಹಾರಲಿರುವ 4 ಗಗನಯಾತ್ರಿಗಳ ಹೆಸರು ಘೋಷಿಸಿದ ಪ್ರಧಾನಿ ಮೋದಿ..!

ದೇಶದ ಚೊಚ್ಚಲ ಮಾನವ ಸಹಿತ ಗಗನಯಾನಕ್ಕೆ ತರಬೇತಿ ಪಡೆಯುತ್ತಿರುವ ನಾಲ್ವರು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಿಸಿದ್ದಾರೆ. ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು ಶುಭಾಂಶು ಶುಕ್ಲಾ ಎಂಬುವರ ಹೆಸರನ್ನು ಪ್ರಕಟಿಸಿದ್ದು, ಕೇರಳದ ತುಂಬಾದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ಮೋದಿ ರಿವೀಲ್​ ಮಾಡಿದ್ದಾರೆ.

ಇನ್ನು ಪ್ರಧಾನಿ ಮೋದಿ ನಾಲ್ವರು ಯಾತ್ರಿಗಳಿಗೂ ಗಗನಯಾನದ ಕಿಟ್ ನೀಡುವ ಮೂಲಕ ಶುಭ ಹಾರೈಸಿದ್ದು, ಈ ಗಗನಯಾತ್ರಿಗಳು ದೇಶದ 1.4 ಬಿಲಿಯನ್ ಜನರ ಆಕಾಂಕ್ಷೆಗಳನ್ನು ಒಳಗೊಂಡಿರುವ ನಾಲ್ಕು ಶಕ್ತಿಗಳು ಎಂದೂ ಬಣ್ಣಿಸಿದ್ದಾರೆ.

4 ಗಗನಯಾತ್ರಿಗಳು..!
ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣ ನಾಯರ್
ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್
ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್‌
ವಿಂಗ್ ಕಮ್ಯಾಂಡರ್ ಶುಭಾಂಶು ಶುಕ್ಲಾ

ಈ 4 ಗಗನಯಾತ್ರಿಗಳು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್‌ ಮತ್ತು ಗ್ರೂಪ್ ಕ್ಯಾಪ್ಟನ್‌ಗಳು. ಪರೀಕ್ಷಾ ಪೈಲಟ್‌ಗಳಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಏನಾದರೂ ತಪ್ಪಾದ ಸಂದರ್ಭಗಳಲ್ಲಿ ತ್ವರಿತವಾಗಿ ಪ್ರತಿಕ್ರಿಯಿಸಲು ಅವರು ಈಗಾಗಲೇ ತರಬೇತಿ ಪಡೆದಿದ್ದಾರೆ. ಬೆಂಗಳೂರಿನಲ್ಲಿರುವ ಬಾಹ್ಯಾಕಾಶ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ಈ ನಾಲ್ವರೂ ಗಗನಯಾತ್ರಿಗಳು ತರಬೇತಿ ಪಡೆಯುತ್ತಿದ್ದಾರೆ. ಗಗನಯಾತ್ರಿಗಳ ಆಯ್ಕೆಯು ಐಎಎಫ್‌ನ ಇನ್‌ಸ್ಟಿಟ್ಯೂಟ್ ಆಫ್ ಏರೋಸ್ಪೇಸ್ ಮೆಡಿಸಿನ್‌ನಲ್ಲಿ ನಡೆದಿದೆ.

ISRO ಮತ್ತು ರಷ್ಯಾದ ಬಾಹ್ಯಾಕಾಶ ಸಂಸ್ಥೆ ಜೂನ್ 2019 ರಲ್ಲಿ ನಾಲ್ಕು ಗಗನಯಾತ್ರಿಗಳ ತರಬೇತಿಗಾಗಿ ತಿಳುವಳಿಕೆಯ ಜ್ಞಾಪಕ ಪತ್ರಕ್ಕೆ ಸಹಿ ಹಾಕಿದ್ದವು. ನಾಲ್ಕು ಗಗನಯಾತ್ರಿಗಳು ರಷ್ಯಾದ ಯೂರಿ ಗಗಾರಿನ್ ಗಗನಯಾತ್ರಿ ತರಬೇತಿ ಕೇಂದ್ರದಲ್ಲಿ 13 ತಿಂಗಳು ತರಬೇತಿ ಪಡೆದಿದ್ದಾರೆ. 2024 ರ ಅಂತ್ಯದ ವೇಳೆಗೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಭಾರತೀಯ ಗಗನಯಾತ್ರಿಗಳಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತರಬೇತಿ ನೀಡಲಿದೆ ಎಂದು ಸಂಸ್ಥೆಯ ನಿರ್ವಾಹಕ ಬಿಲ್ ನೆಲ್ಸನ್ 2023 ರಲ್ಲಿ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದರು.

ಇದನ್ನೂ ಓದಿ : ಅಯೋಗ್ಯ, ಮುಟ್ಟಾಳ ಎಂದು ನಿಂದಿಸಿದ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ಹಾಕಿದ ಪ್ರತಾಪ್ ಸಿಂಹ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here