Download Our App

Follow us

Home » ರಾಜಕೀಯ » ಏಪ್ರಿಲ್​​ 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ – ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಬೃಹತ್​ ಸಮಾವೇಶ..!

ಏಪ್ರಿಲ್​​ 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ – ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಬೃಹತ್​ ಸಮಾವೇಶ..!

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆಯಷ್ಟೇ ಮೈಸೂರು, ಮಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಏಪ್ರಿಲ್ 20ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಬೃಹತ್ ಸಮಾವೇಶ ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಏಪ್ರಿಲ್ 20ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ, ಸಂಜೆ 5:30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಕಾರ್ಯಕರ್ತರು, ಸಾರ್ವಜನಿಕರು ಚಿಕ್ಕಬಳ್ಳಾಪುರದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್​​, ಕೋಲಾರದ ಮಲ್ಲೇಶ್​ಬಾಬು ಪರ ಮೋದಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ. ನಂತರ ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯುವ ಚಿತ್ರದುರ್ಗ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೂಡ ಮೋದಿ ಪ್ರಚಾರ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ : ಮಂಗಳೂರಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮುಗಿದ ಬಳಿಕ ಯುವಕರ ಮಧ್ಯೆ ಹೊಯ್ ಕೈ – ಅಸಲಿಗೆ ಆಗಿದ್ದೇನು?

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here