Download Our App

Follow us

Home » ರಾಜಕೀಯ » ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ – ಈ ರಸ್ತೆಗಳಲ್ಲಿ ವಾಹನ ಸವಾರರಿಗೆ ನೋ ಎಂಟ್ರಿ..!

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ – ಈ ರಸ್ತೆಗಳಲ್ಲಿ ವಾಹನ ಸವಾರರಿಗೆ ನೋ ಎಂಟ್ರಿ..!

ಬೆಂಗಳೂರು : ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಹೇಗಾದರೂ ಶತಾಯ ಗತಾಯ ಗೆಲುವು ಸಾಧಿಸಲು ಹರಸಾಹಸ ಪಡುತ್ತಿವೆ. ಅದರಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್​ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಬಿಗಿ ಪೊಲೀಸ್​ ಬಂದೂಬಸ್ತ್ ಮಾಡಲಾಗಿದೆ.

ಸಂಚಾರ ಮಾರ್ಗ ಬದಲಾವಣೆ : ಇಂದು ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಈ ಹಿನ್ನಲೆ ವಾಹನ ಸವಾರರಿಗೆ ಅಡಚಣೆಯಾಗದಂತೆ ಸಂಚಾರಿ ಪೊಲೀಸರು ನಗರದ ಹನ್ನೊಂದು ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಿದ್ದಾರೆ.

ಈ ರಸ್ತೆಯಲ್ಲಿ ಸಂಚಾರ ವ್ಯತ್ಯಯ – ಪ್ಯಾಲೇಸ್ ರಸ್ತೆ, ಜಯಮಹಲ್, ರಮಣಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಖ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಲಿದೆ.

ಪರ್ಯಾಯ ಮಾರ್ಗ – ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆ ಅರಮನೆ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದ್ದು, ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ : ಇಂದು ಚಿಕ್ಕಬಳ್ಳಾಪುರ-ಬೆಂಗಳೂರಲ್ಲಿ ಮೋದಿ ಮೇನಿಯಾ – ಅರಮನೆ ಮೈದಾನದಲ್ಲಿ ಕೇಸರಿ ಪಡೆ ಶಕ್ತಿ ಪ್ರದರ್ಶನ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here