Download Our App

Follow us

Home » ರಾಜಕೀಯ » ಏ​.14ರಂದು ರಾಜ್ಯಕ್ಕೆ ನಮೋ ಆಗಮನ – ಚಿಕ್ಕಬಳ್ಳಾಪುರದಲ್ಲಿ ಸಮಾವೇಶ, ಬೆಂಗಳೂರಲ್ಲಿ ಬೃಹತ್ ರೋಡ್ ಶೋ..!

ಏ​.14ರಂದು ರಾಜ್ಯಕ್ಕೆ ನಮೋ ಆಗಮನ – ಚಿಕ್ಕಬಳ್ಳಾಪುರದಲ್ಲಿ ಸಮಾವೇಶ, ಬೆಂಗಳೂರಲ್ಲಿ ಬೃಹತ್ ರೋಡ್ ಶೋ..!

ಬೆಂಗಳೂರು : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿದ್ದು, ತಮ್ಮ ತಮ್ಮ ಪಕ್ಷದ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ಏಪ್ರಿಲ್ 14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ರಾಜ್ಯ ಕೇಸರಿ ಕಲಿಗಳ ಪರ ಪ್ರಧಾನಿ ನರೇಂದ್ರ ಮೋದಿ ಮತಬೇಟೆ ನಡೆಸಲಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಪ್ರಧಾನಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡು ರೋಡ್ ಶೋ ನಡೆಸಲು ಪ್ಲಾನ್ ರೂಪಿಸಲಾಗಿದೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡ ರೋಡ್ ಶೋ ನಡೆಸುವ ಸಾಧ್ಯತೆಯಿದೆ. ನಮೋ ರೋಡ್ ಶೋಗೆ ರಾಜ್ಯ ಬಿಜೆಪಿ ಇಂದು ರೂಟ್‍ಮ್ಯಾಪ್ ಸಿದ್ಧಪಡಿಸುವ ಸಾಧ್ಯತೆಗಳಿವೆ.

ಇದನ್ನೂ ಓದಿ : ವಿಶ್ವದಲ್ಲಿ ಸುಳ್ಳು ಹೇಳುವ ಪಕ್ಷ ಬಿಜೆಪಿ, ಅದರಲ್ಲಿ ನಂ.1 ಪ್ರಹ್ಲಾದ ಜೋಶಿ : ಸಂತೋಷ್​ ಲಾಡ್ ಕಿಡಿ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here