Download Our App

Follow us

Home » ರಾಜಕೀಯ » ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿಡಿ ಸಂತಾಪ..!

ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿಡಿ ಸಂತಾಪ..!

ಬೆಂಗಳೂರು : ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಅವರ ಅಗಲಿಕೆಗೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾವ 1.27ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಕಂಬನೆ ಮಿಡಿದಿದ್ದಾರೆ.

ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ತಮ್ಮ ಸಮಾಜ ಸೇವೆಗಳಿಂದಲೇ ಬಹಳ ಜನಪ್ರಿಯರಾಗಿದ್ದರು. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಸಂತಾಪ : ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು, ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ‌ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here