Download Our App

Follow us

Home » ರಾಜಕೀಯ » ರಾಷ್ಟ್ರ ನಾಯಕರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ನರೇಂದ್ರ ಮೋದಿ..!

ರಾಷ್ಟ್ರ ನಾಯಕರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ನರೇಂದ್ರ ಮೋದಿ..!

ನವದೆಹಲಿ : ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೋದಿಯವರ ಅದ್ಧೂರಿ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನರೇಂದ್ರ ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಮಹಾತ್ಮ ಗಾಂಧೀಜಿ, ಅಟಲ್​ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ರಾಜಘಾಟ್​, ಸದೈವ ಸ್ಮಾರಕಕ್ಕೆ ಪುಷ್ಪ ಅರ್ಪಿಸಿದ ಮೋದಿ ದೆಹಲಿಯ ಯುದ್ಧ ಸ್ಮಾರಕಕ್ಕೂ ತೆರಳಿ ನಮನ ಸಲ್ಲಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಮೂಲಕ ನಮೋ 3.0 ದರ್ಬಾರ್​​ ಇಂದಿನಿಂದಲೇ ಆರಂಭವಾಗಲಿದೆ.

ಇನ್ನು ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ನಾಯಕರು, ಅಯೋಧ್ಯೆ ರಾಮಮಂದಿರ ನಿರ್ಮಾಣದ ಕಾರ್ಮಿಕರು ಹಾಗೂ ಹೊಸ ಸಂಸತ್​​​ ವಿಸ್ತಾ ಕಟ್ಟಡ ನಿರ್ಮಾಣಕಾರರಿಗೆ ಆಹ್ವಾನವಿದ್ದು, ಅವರೆಲ್ಲರ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದೆ.

ಇದನ್ನೂ ಓದಿ : ಬೆಂಗಳೂರು : ಕಾರಿಗೆ ಬೈಕ್ ಅಡ್ಡ ಹಾಕಿ ಬಾನೆಟ್‌ಗೆ ಒದ್ದು ಪರಾರಿಯಾದ ಬೈಕ್ ಸವಾರ..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here