ಮಂಗಳೂರು : ಲೋಕಸಭಾ ಚುನಾವಣೆಯ ಕಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ವೇಳೆ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ತಯಾರಿ ನಡೆಸುತ್ತಿವೆ. ಇದೀಗ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಲಿದೆ. ಕೇಸರಿ ಭದ್ರ ಕೋಟೆಯಿಂದಲೇ ಮೋದಿ ಅಬ್ಬರಿಸಲು ರೆಡಿಯಾಗಿದ್ದು, ಕರಾವಳಿಯಿಂದಲೇ ನಮೋ ಮತಬೇಟೆ ಶುರು ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರ ಕೂಳೂರಿನ ಗೋಲ್ಡ್ಪಿಂಚ್ ಸಿಟಿ ಮೈದಾನದಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಬೃಹತ್ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನೀರಿಕ್ಷೆಯಿದ್ದು, ಮಂಗಳೂರು, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿಗಳ ಪರ ಮೋದಿ ಪ್ರಚಾರ ಮಾಡಲಿದ್ದಾರೆ.
ಮೋದಿ ಮಂಗಳೂರಿನ ಬೃಹತ್ ಸಮಾವೇಶ, ರ‍್ಯಾಲಿ ಬಳಿಕ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ತೆರಳಿ ಅಲ್ಲಿ ಸಂಜೆ 5.30ಕ್ಕೆ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು ಉತ್ತರದಲ್ಲಿ ನಮೋ ರೋಡ್ ಶೋ ನಡೆಯಲಿದ್ದು, 2.5 ಕಿಲೋ ಮೀಟರ್ ರೋಡ್ ಶೋ ನಡೆಸಲು ತಯಾರಿ ನಡೆದಿದೆ. ಬಿಜೆಪಿ ನಾಯಕರು ರೂಟ್ ಪ್ಲಾನ್ ತಯಾರಿಸಿದ್ದು, ಬೆಂಗಳೂರಿನ 3 ಕ್ಷೇತ್ರ, ಬೆಂಗಳೂರು ಗ್ರಾಮಾಂತರ ಕ್ಷೇತ್ರ
ಕೋಲಾರ, ಚಿಕ್ಕಬಳ್ಳಾಪುರ ಅಭ್ಯರ್ಥಿಗಳ ಪರ ನಮೋ ಮತಯಾಚನೆ ಮಾಡಲಿದ್ದಾರೆ. ದೇವನಹಳ್ಳಿ ಅಥವಾ ಚಿಕ್ಕಬಳ್ಳಾಪುರದಲ್ಲಿ ಸಮಾವೇಶಕ್ಕೂ ಪ್ಲಾನ್ ನಡೆಯುತ್ತಿದೆ.
ಇದನ್ನೂ ಓದಿ : ರಕ್ಷಿತ್ ಶೆಟ್ಟಿ ಜೊತೆ ಆ್ಯಂಕರ್ ಅನುಶ್ರೀ ಮದುವೆ ಆಯ್ತಾ..? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಇವರಿಬ್ಬರ ಮದುವೆ ಫೋಟೋಸ್..!