Download Our App

Follow us

Home » ರಾಜ್ಯ » ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ – ಬೀದರ್‌, ಹಾವೇರಿ, ಧಾರವಾಡ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್​..!

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ – ಬೀದರ್‌, ಹಾವೇರಿ, ಧಾರವಾಡ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್​..!

ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್‌ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್‌ಪಿ ಎಂ.ಎಸ್.ಕೌಲಾಪುರೇ ನೇತೃತ್ವದಲ್ಲಿ ದಾಳಿ ನಡೆದಿದೆ. ಸಿಪಿಐ ಮಧುಸೂಧನ್, ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಮನೆಯ ಪ್ರತಿಯೊಂದು ಕೋಣೆಯನ್ನು ಪರಿಶೀಲನೆ ಮಾಡಿದ್ದಾರೆ.

ಗಡಿಜಿಲ್ಲೆ ಬೀದರ್‌ನಲ್ಲಿಯೂ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಪೋಲಿಸರು ಶಾಕ್ ಕೊಟ್ಟಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ  ರವೀಂದ್ರಕುಮಾರ್​ ರೊಟ್ಟೆ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಿವಾಸ ಹಾಗೂ ಬೀದರ್‌ನ ನೌಬಾದ್‌ನಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಾವೇರಿಯಲ್ಲಿಯೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಕಾರು ಚಾಲಕ ಸಿದೋಜಿ ಸೂರ್ಯವಂಶಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಸಿಡಿಪಿಓ ಕಚೇರಿಯ ಮೇಲ್ವಿಚಾರಕಿ ಜ್ಯೋತಿ ಶಿಗ್ಲಿ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಹಣ ಹಾಗೂ ಆಸ್ತಿ ದಾಖಲೆಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಸದ್ಯ ಮೃತ್ಯುಂಜಯ ನಗರದಲ್ಲಿರುವ ಮನೆಯಲ್ಲಿ ಹಾವೇರಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಧಾರವಾಡದಲ್ಲಿ ಕೆಐಎಡಿಬಿ AEE ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಧಾರವಾಡ ನಗರದ ಗಾಂಧಿನಗರ ಬಡಾವಣೆಯಲ್ಲಿನ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ. ಆಸ್ತಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ಗೋವಿಂದಪ್ಪ ಭಜಂತ್ರಿಗೆ ಸಂಬಂಧಪಟ್ಟ ಆರು ಕಡೆ ದಾಳಿ ಮಾಡಲಾಗಿದೆ. ಧಾರವಾಡದಲ್ಲಿ ಮೂರು ಕಡೆ, ಸವದತ್ತಿ ತಾಲೂಕಿನಲ್ಲಿ ಎರಡು ಕಡೆ ಹಾಗೂ ನರಗುಂದದಲ್ಲಿ ಒಂದು ಕಡೆ ದಾಳಿ ನಡೆದಿದೆ.

ಸವದತ್ತಿ ತಾಲೂಕಿನ ಹೂಲಿ ಹಾಗೂ ಉಗರಗೋಳ ಗ್ರಾಮದ ಫಾರ್ಮ್ ಹೌಸ್ ಮೇಲೆ ರೇಡ್ ಮಾಡಲಾಗಿದೆ. ಗೋವಿಂದಪ್ಪ ಕೆಲಸ ಮಾಡುವ ಲಕಮನಹಳ್ಳಿ ಧಾರವಾಡ ಕೆಐಎಡಿಬಿ ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ನರಗುಂದದಲ್ಲಿರೋ ಸಹೋದರನ ಮನೆ ಮೇಲೂ ದಾಳಿ ನಡೆದಿದೆ. ಗೋವಿಂದಪ್ಪನ ಮನೆ ಎದುರು ನಿಲ್ಲಿಸಿದ್ದ ಕಾರುಗಳ ಪರಿಶೀಲನೆ ಮಾಡಲಾಗಿದೆ. ದಾಖಲೆ ಪತ್ರಗಳ ಬಗ್ಗೆ ಪರಿಶೀಲನಾ ವರದಿಯಲ್ಲಿ ನಮೂದಿಸಿಕೊಂಡಿದ್ದಾರೆ.

ಇದನ್ನೂ ಓದಿ : ಅಂಬರೀಶ್​ ಮನೆಗೆ ಜೂನಿಯರ್ ಅಂಬಿ ಎಂಟ್ರಿ.. ಅಭಿಷೇಕ್-ಅವಿವಾ ದಂಪತಿಗೆ ಗಂಡು ಮಗು ಜನನ..!

Leave a Comment

DG Ad

RELATED LATEST NEWS

Top Headlines

ಕೋವಿಡ್ ಹಗರಣದ ತನಿಖೆಗೆ SIT ರಚನೆ – ಅರೆಸ್ಟ್ ಆಗ್ತಾರಾ ಹಾರ್ಟ್ ಡಾಕ್ಟರ್ ಸಿಎನ್​ ಮಂಜುನಾಥ್?

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎನ್ನಲಾಗಿರುವ ಬಗ್ಗೆ ಈಗಾಗಲೇ ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು,

Live Cricket

Add Your Heading Text Here