Download Our App

Follow us

Home » ಸಿನಿಮಾ » ‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾದ ಮೋಷನ್‌ ಪೋಸ್ಟರ್‌ ರಿಲೀಸ್..!

‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾದ ಮೋಷನ್‌ ಪೋಸ್ಟರ್‌ ರಿಲೀಸ್..!

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಅನೂಪ್‌ ರೇವಣ್ಣ ಹಾಗೂ ನಟಿ  ಧನ್ಯಾ ರಾಮ್​ಕುಮಾರ್​ ಅಭಿನಯದ ‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾ ಮೋಷನ್​ ಪೋಸ್ಟರ್​ ರಿಲೀಸ್‌ ಆಗಿದೆ.  ಈ ಚಿತ್ರ ಈಗಾಗಲೇ ಶೀರ್ಷಿಕೆಯಿಂದಲೇ  ಕೌತುಕ ಮೂಡಿಸಿದ್ದು, ಇದೀಗ ಮೋಷನ್​ ಪೋಸ್ಟರ್ ಮೂಲಕ ಇನ್ನಷ್ಟು ಕುತೂಹಲ ಕೆರಳಿಸಿದೆ. ಇದರಲ್ಲಿ ಇವರಿಬ್ಬರ ಗೆಟಪ್‌ ತುಂಬಾ ಚೆನ್ನಾಗಿಯೇ ಹೈಲೈಟ್‌ ಆಗಿದ್ದು. ಇದಕ್ಕಾಗಿ ಸಿನಿರಸಿಕರು ಬಹಳ ದಿನದಿಂದ ಕಾಯುತ್ತಿದ್ದರು.

ಮೋಷನ್​ ಪೋಸ್ಟರ್
ಮೋಷನ್​ ಪೋಸ್ಟರ್

‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾದಲ್ಲಿ ಸಸ್ಪೆನ್ಸ್​ ಮತ್ತು ಥ್ರಿಲ್ಲರ್​ ಅಂಶಗಳಿರುವುದರ ಜೊತೆಗೆ ಇದೊಂದಿಗೆ ರಿವರ್ಸ್​ ಸ್ಕ್ರೀನ್​ಪ್ಲೇ ಆಗಿದೆ ಎಂದು ಸಿನಿತಂಡದವರು ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಅನೂಪ್‌ ರೇವಣ ಕಿಡ್ನಾಪರ್​ ರೋಲ್‌ ಪ್ಲೇ ಮಾಡಿದ್ದಾರೆ. ಇನ್ನು ಸಿನಿಮಾದಲ್ಲಿ ನಟಿ ಧನ್ಯಾ ರಾಮ್‌ಕುಮಾರ್‌  ಉದ್ಯಮಿಯ ಮಗಳ ಪಾತ್ರವನ್ನು ನಿರ್ವಹಿಸಿದ್ದಾರೆ.

ಅನೂಪ್​ ರೇವಣ್ಣ, ಧನ್ಯಾ ರಾಮ್​ಕುಮಾರ್​ ಜೊತೆಗೆ  ‘ಹೈಡ್​ ಆ್ಯಂಡ್​ ಸೀಕ್​’ ಚಿತ್ರದಲ್ಲಿ ಮೈತ್ರಿ ಜಗ್ಗಿ, ಸೂರಜ್​, ಬಲರಾಜ್​ ವಾಡಿ, ಕೃಷ್ಣ ಹೆಬ್ಬಾಳೆ, ರಾಜೇಶ್​ ನಟರಂಗ, ಅರವಿಂದ್​ ರಾವ್ ಅಂತ ದೊಡ್ಡ ತಾರಾಬಳಗವೇ ಇದೆ.  ಡೈರೆಕ್ಟರ್‌ ಪುನೀತ್​ ನಾಗರಾಜು ‘ಹೈಡ್​ ಆ್ಯಂಡ್​ ಸೀಕ್​’ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದು, ಇದಕ್ಕೆ ವಸಂತ್​ ಎಂ. ರಾವ್​ ಕುಲಕರ್ಣಿ ಹಾಗೂ ಪುನೀತ್​ ನಾಗರಾಜು​ ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ‘ಸುನೇರಿ ಆರ್ಟ್​ ಕ್ರಿಯೇಷನ್ಸ್​’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ್ದು, ಚಿತ್ರದ ದೃಶ್ಯಗಳನ್ನು ಪಿಜೋ ಪಿ. ಜಾನ್ ಸೆರೆಹಿಡಿದಿದ್ದಾರೆ.

ಮ್ಯೂಸಿಕ್‌ ಕಂಪೋಸರ್ ಸ್ಯಾಂಡಿ ಅಡ್ಡಂಕಿ ‘ಹೈಡ್​ ಆ್ಯಂಡ್​ ಸೀಕ್​’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ ಮತ್ತು ಮಧು ತುಂಬೆಕೆರೆ ಸಂಕಲನ ಮಾಡಿದ್ದಾರೆ. ಈಗಾಗಲೇ ‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾದ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದ್ದು, ಈ ಚಿತ್ರ ರಾಜ್ಯದೆಲ್ಲೆಡೆ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಈ ಸಿನಿಮಾ ಇದೇ ವರ್ಷ ಮಾರ್ಚ್​ 15ರಂದು ರಿಲೀಸ್‌ ಆಗಲಿದೆ.

ಇದನ್ನೂ ಓದಿ : ಇಂಗ್ಲೆಂಡ್‌ ವಿರುದ್ಧದ 4ನೇ ಟೆಸ್ಟ್‌ನಲ್ಲೂ ಭಾರತಕ್ಕೆ ರೋಚಕ ಜಯ – ಸರಣಿ ವಶಪಡಿಸಿಕೊಂಡ ರೋಹಿತ್ ಪಡೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here