Download Our App

Follow us

Home » ಸಿನಿಮಾ » ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಬಹುನಿರೀಕ್ಷಿತ ಸಿನಿಮಾ “ದ ಜಡ್ಜ್ ಮೆಂಟ್” ಮೇ 24 ರಂದು ತೆರೆಗೆ..! 

ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಬಹುನಿರೀಕ್ಷಿತ ಸಿನಿಮಾ “ದ ಜಡ್ಜ್ ಮೆಂಟ್” ಮೇ 24 ರಂದು ತೆರೆಗೆ..! 

G9 ಕಮ್ಯುನಿಕೇಶನ್ ಮೀಡಿಯಾ & ಎಂಟರ್​ಟೈನ್​ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacyಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

 

ನಿರ್ದೇಶಕ ಗುರುರಾಜ ಕುಲಕರ್ಣಿ ಸಿನಿಮಾದ ಬಗ್ಗೆ ಮಾತನಾಡುತ್ತ , ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ನ ಚಿತ್ರ. “ಯದ್ದಕಾಂಡ” ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಅವರ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ, ಮೇಘನಾ ಗಾಂವ್ಕರ್, ರಂಗಾಯಣ ರಘು, ಪ್ರಕಾಶ್ ಬೆಳವಾಡಿ ಅವರನ್ನು ಒಳಗೊಂಡ ಬಹು ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಮೇ 24 ಚಿತ್ರರಂದು ಕರ್ನಾಟಕ ಮಾತ್ರವಲ್ಲದೆ, ಡೆಲ್ಲಿ, ಮುಂಬೈ, ಲಕ್ನೋ, ಗೋವಾ, ಆಂದ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ಪ್ರತಿಷ್ಠಿತ ರಿಲಯನ್ಸ್ ಎಂಟರ್ ಟೈನ್ಮೆಂಟ್ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆ ಎಂದರು.

ನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ಸಾಮಾನ್ಯವಾಗಿ ನನ್ನ ಸಿನಿಮಾ‌ ಹಾಡುಗಳ ಮೂಲಕ ಜನಪ್ರಿಯ.‌ ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು “ಜಡ್ಜ್ ಮೆಂಟ್”. ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ ” ಜಡ್ಜ್ ಮೆಂಟ್ ” ಅಂತಿಮ ಎನ್ನುತ್ತಾರೆ ನಟ ರವಿಚಂದ್ರನ್.

ಚಿತ್ರದಲ್ಲಿ ಅಭಿನಯಿಸಿರುವ ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್, ಚಿತ್ರಕಥೆ ಬರೆದಿರುವ ವಾಸುದೇವ ಮೂರ್ತಿ ಸೇರಿದಂತೆ ಅನೇಕ ತಂತ್ರಜ್ಞರು “ದ ಜಡ್ಜ್ ಮೆಂಟ್” ಚಿತ್ರದ ಕುರಿತು ಮಾತನಾಡಿದರು.

ನಿರ್ಮಾಪಕರಾದ ಗುರುರಾಜ್ ಕುಲಕರ್ಣಿ(ನಾಡಗೌಡ), ಶರದ್ ನಾಡಗೌಡ, ವಿಶ್ವನಾಥ್ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ್, ಪ್ರತಿಮಾ ಬಿರಾದಾರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅನೂಪ್ ಸೀಳಿನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಹಾಡನ್ನು ಹಾಗೂ ಎಂ.ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ : KSRTC ಬಸ್ ಕಿಟಕಿಯಿಂದ ಉಗುಳೋಕೆ ಹೋಗಿ ಮಹಿಳೆಯ ತಲೆ ಲಾಕ್ – ವಿಡಿಯೋ ವೈರಲ್..!

Leave a Comment

DG Ad

RELATED LATEST NEWS

Top Headlines

BTV mega exclusive : ಬೆಂಗಳೂರು ದಕ್ಷಿಣ ಎಸಿ ರಜನಿಕಾಂತ್ ವಿರುದ್ಧ ಭ್ರಷ್ಟಾಚಾರ ಆರೋಪ..!

ಬೆಂಗಳೂರು : ಜಮೀನು ಖಾತಾ ಮಾಡಿಕೊಡಲು ಫೋನ್​ ಪೇ / ಆನ್ ಲೈನ್ ಮೂಲಕ ಅಧಿಕಾರಿಯೊಬ್ಬರು ಲಂಚ ವಸೂಲಿ ಮಾಡಿರುವ ಆರೋಪವೊಂದು ಕೇಳಿದೆ ಬಂದಿದೆ. ಬೆಂಗಳೂರು ದಕ್ಷಿಣ

Live Cricket

Add Your Heading Text Here