Download Our App

Follow us

Home » ರಾಜಕೀಯ » ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನಿಲ್​ ಬೋಸ್​ – ಸಂಸದನ ನಡೆ ಬಗ್ಗೆ ಭಾರೀ ಚರ್ಚೆ..!

ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನಿಲ್​ ಬೋಸ್​ – ಸಂಸದನ ನಡೆ ಬಗ್ಗೆ ಭಾರೀ ಚರ್ಚೆ..!

ಮೈಸೂರು : ಚಾಮರಾಜನಗರ ಸಂಸದರು ದೇವಾಲಯದ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಘಟನೆ ನಡೆದಿದೆ. ಇದೀಗ ಚಾಮುಂಡೇಶ್ವರಿ ಮುಂದೆ ಕುಂಕುಮ ಇಟ್ಟಿದ್ದೇ ಭಾರೀ ಚರ್ಚೆಗೆ ಎಡೆಮಾಡಿ ಕೊಟ್ಟಿದೆ.

ಆಷಾಢ ಮಾಸದ 3ನೇ ಶುಕ್ರವಾರ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಹಾಗೂ ಸಂಸದ ಸುನೀಲ್‌ ಬೋಸ್ ಚಾಮುಂಡಿ ಬೆಟ್ಟಕ್ಕೆ ಜೊತೆಯಾಗಿ ಬಂದಿದ್ದರು. ಈ ವೇಳೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವಾಗ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸುನೀಲ್ ಬೋಸ್​ ಕುಂಕುಮ ಇಟ್ಟಿದ್ದಾರೆ. ಸುನೀಲ್‌ಬೋಸ್ ನಡೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯಾಕೆಂದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚಾಮರಾಜನಗರ ಬಿಜೆಪಿ ಮುಖಂಡರು ದೂರನ್ನೂ ನೀಡಿದ್ದರು. ಸುನೀಲ್‌ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ಕೊಟ್ಟಿದ್ದರು.

ಇದನ್ನೂ ಓದಿ : ನಂಜನಗೂಡಿನಲ್ಲಿ ಹೆಚ್​ಡಿಕೆಗೆ ಅಪಮಾನ ಪ್ರಕರಣ – ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ ಮೈಸೂರು ಜಿಲ್ಲಾಧಿಕಾರಿ..!

Leave a Comment

DG Ad

RELATED LATEST NEWS

Top Headlines

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಸರಿಗಮ ವಿಜಿ ನಿಧನ!

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅವರು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರಿಗೆ ಶ್ವಾಸಕೋಶದ

Live Cricket

Add Your Heading Text Here