ಮೈಸೂರು : ಚಾಮರಾಜನಗರ ಸಂಸದರು ದೇವಾಲಯದ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಘಟನೆ ನಡೆದಿದೆ. ಇದೀಗ ಚಾಮುಂಡೇಶ್ವರಿ ಮುಂದೆ ಕುಂಕುಮ ಇಟ್ಟಿದ್ದೇ ಭಾರೀ ಚರ್ಚೆಗೆ ಎಡೆಮಾಡಿ ಕೊಟ್ಟಿದೆ.
ಆಷಾಢ ಮಾಸದ 3ನೇ ಶುಕ್ರವಾರ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಹಾಗೂ ಸಂಸದ ಸುನೀಲ್ ಬೋಸ್ ಚಾಮುಂಡಿ ಬೆಟ್ಟಕ್ಕೆ ಜೊತೆಯಾಗಿ ಬಂದಿದ್ದರು. ಈ ವೇಳೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವಾಗ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸುನೀಲ್ ಬೋಸ್ ಕುಂಕುಮ ಇಟ್ಟಿದ್ದಾರೆ. ಸುನೀಲ್‌ಬೋಸ್ ನಡೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಯಾಕೆಂದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ತಮಗೆ ಮದುವೆ ಆಗಿಲ್ಲ ಎಂದು ಸುನೀಲ್ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚಾಮರಾಜನಗರ ಬಿಜೆಪಿ ಮುಖಂಡರು ದೂರನ್ನೂ ನೀಡಿದ್ದರು. ಸುನೀಲ್ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ಕೊಟ್ಟಿದ್ದರು.
ಇದನ್ನೂ ಓದಿ : ನಂಜನಗೂಡಿನಲ್ಲಿ ಹೆಚ್ಡಿಕೆಗೆ ಅಪಮಾನ ಪ್ರಕರಣ – ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ ಮೈಸೂರು ಜಿಲ್ಲಾಧಿಕಾರಿ..!