Download Our App

Follow us

Home » ಸಿನಿಮಾ » ಡಾ. ವೀರೇಂದ್ರ ಹೆಗ್ಗಡೆ ಅವರಿಂದ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರದ ನೂತನ ಪೋಸ್ಟರ್ ರಿಲೀಸ್..!

ಡಾ. ವೀರೇಂದ್ರ ಹೆಗ್ಗಡೆ ಅವರಿಂದ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರದ ನೂತನ ಪೋಸ್ಟರ್ ರಿಲೀಸ್..!

ಹೊನ್ನರಾಜ್ ನಿರ್ದೇಶನದ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರವೀಗ ರಿಲೀಸ್​ಗೆ ರೆಡಿಯಾಗಿದೆ. ಹೊನ್ನರಾಜ್ ಅವರು ಮೊದಲಬಾರಿಗೆ ಆಕ್ಷನ್ ಕಟ್ ಹೇಳುವ ಜೊತೆಗೆ ಸಿನಿಮಾದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನಿರ್ಮಾಣವನ್ನೂ ಮಾಡಿದ್ದಾರೆ. ಈ ಚಿತ್ರದ ನೂತನ ಪೋಸ್ಟರ್​​ನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆ ಅವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ನಾಯಕ ಹೊನ್ನರಾಜ್, ರಾಜೇಂದ್ರ, ನಂದಿಹಳ್ಳಿ ಶಿವಣ್ಣ, ಜಗದೀಶ್ , ಸಹನಿರ್ದೇಶಕ ಪ್ರಕಾಶ್ ವೆಂಕಟರಮಣ, ಸ್ಟಿಲ್ ವೆಂಕಟೇಶ್, ಮೋಹನ್, ಜಗನ್ನಾಥ್ ಇತರರಿದ್ದರು.
ನೈಜ ಘಟನೆಯನ್ನು ಆಧರಿಸಿ ನಿರ್ಮಾಣವಾಗಿರುವ ಫ್ಯಾಮಿಲಿ ಎಂಟರ್​ಟೈನ್​ಮೆಂಟ್ ಚಿತ್ರ ಇದಾಗಿದೆ. ಇಲ್ಲಿ ನಾಯಕ ಯಶ್ ಅಭಿಮಾನಿ, ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುವವನು‌, ಸದಾ ಸಮಾಜ ಸೇವೆಯಲ್ಲಿ ತೊಡಗಿರುವ ನಾಯಕ ಮದುವೆ ಆಗ್ತಾನೋ ಇಲ್ಲವೋ, ಎನ್ನುವುದೇ ಚಿತ್ರದ ಕಥಾಹಂದರ.

ಈ ಚಿತ್ರಕ್ಕೆ ಮದ್ದೂರು, ಹುಳಿಯಾರು, ಚಿಕ್ಕನಾಯಕನಾಹಳ್ಳಿ, ಶ್ರೀರಂಗಪಟ್ಟಣದ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ನಾಯಕಿ ಶೃತಿ ಬಬಿತ ಬಜಾರಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಸಂಜಯ್ ಶ್ರೀನಿವಾಸ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ವಿನು ಮನಸು ಅವರ ಸಂಗೀತ, ಶಿವಪುತ್ರ ಅವರ ಛಾಯಾಗ್ರಹಣ, ಗಿರೀಶ್ ಅವರ ನೃತ್ಯ ನಿರ್ದೇಶನ‌ಈ ಚಿತ್ರಕ್ಕಿದೆ. ಮೈಸೂರು ಮಂಜುಳ , ರೇಖಾದಾಸ್ ಮತ್ತಿತರರು ಈ ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ : ಪ್ರಜಾಪ್ರಭುತ್ವವು ಯಾರ ಕೈಗೊಂಬೆಯೂ ಅಲ್ಲ – ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಕೇಂದ್ರಕ್ಕೆ ಸಿದ್ದು ಗುದ್ದು..!

Leave a Comment

DG Ad

RELATED LATEST NEWS

Top Headlines

ಮಾಜಿ ಮಂತ್ರಿ ಮುನಿರತ್ನ ವಿರುದ್ಧ ತಿರುಗಿಬಿದ್ದ ಒಕ್ಕಲಿಗರು – ಕಠಿಣ ಕ್ರಮಕ್ಕೆ ಆಗ್ರಹ..!

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಕೇಸ್‌ನಲ್ಲಿ ಶಾಸಕ ಮುನಿರತ್ನ ಬಂಧನವಾಗಿದೆ. ಇದೀಗ ಒಕ್ಕಲಿಗ ಸಮುದಾಯ ಮತ್ತು ಒಕ್ಕಲಿಗ ಹೆಣ್ಣು ಮಕ್ಕಳಿಗೆ ಅಪಮಾನ  ಮಾಡಿರುವುದನ್ನು

Live Cricket

Add Your Heading Text Here