Download Our App

Follow us

Home » ರಾಜಕೀಯ » ಗೌರಿ-ಗಣೇಶ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್​​​ – ಅರ್ಜಿ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ..!

ಗೌರಿ-ಗಣೇಶ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್​​​ – ಅರ್ಜಿ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ..!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.​ 9ಕ್ಕೆ ಮುಂದೂಡಿಕೆ ಮಾಡಿದೆ.

ಇಂದು ಪ್ರಾಸಿಕ್ಯೂಷನ್​​ಗೆ ಗವರ್ನರ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್​ ಅರ್ಜಿ ವಿಚಾರಣೆಯನ್ನು ಸೆ.​ 9ರ ಮಧ್ಯಾಹ್ನ 2.30ಕ್ಕೆ  ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಗ್​​ ರಿಲೀಫ್​​ ಸಿಕ್ಕಿದೆ.

ಇನ್ನು ಸೆಪ್ಟೆಂಬರ್​ 12ರಂದು ಅಭಿಷೇಕ್​ ಮನುಸಿಂಘ್ವಿ ವಾದ ಮಂಡಿಸಲಿದ್ದಾರೆ. ಬಹುತೇಕ ಸೆಪ್ಟೆಂಬರ್​ 12ರಂದು ಮುಡಾ ಪ್ರಕರಣದ ವಿಚಾರಣೆ ಅಂತ್ಯ ಸಾಧ್ಯತೆಯಿದೆ.

ಇದನ್ನೂ ಓದಿ : ಮೂಡುಗಲ್ಲು ಕೇಶವನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿದ ಜೂ.​ಎನ್​ಟಿಆರ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here