ಮೈಸೂರು : ಮುಡಾ ಪ್ರಕರಣದಲ್ಲಿ A1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಈಗಾಗಲೇ ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಆರಂಭವಾಗಿದ್ದು, ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸಲಿದ್ದಾರೆ. ಸಿಎಂ ವಿಚಾರಣೆ ಹಿನ್ನೆಲೆ ಮೈಸೂರು ಲೋಕಾಯುಕ್ತ ಕಚೇರಿ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ನಗರ ಪೊಲೀಸ್ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪೊಲೀಸರು ಲೋಕಾಯುಕ್ತ ಕಚೇರಿಯನ್ನು ಪರಿಶೀಲಿಸಿದ್ದಾರೆ. ಲೋಕಾಯುಕ್ತ ಕಚೇರಿ ಸಂಪರ್ಕಿಸುವ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಬಂದ್ ಮಾಡಲಾಗಿತ್ತು.
ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ತಮ್ಮದೇ ಖಾಸಗಿ ಕಾರಿನಲ್ಲಿ ಆಗಮಿಸಿದ್ದಾರೆ. ವಿಚಾರಣೆಗೆ ಬರುವಾಗ ಸರ್ಕಾರಿ ವಾಹನ ಬಳಸುವಂತಿಲ್ಲ. ಹೀಗಾಗಿ ತಮ್ಮದೇ ಕಾರಿನಲ್ಲಿ ಬಂದಿದ್ದಾರೆ.
ಇದನ್ನೂ ಓದಿ : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರಕ್ಕೆ ಸಿಕ್ತು ಗ್ರೀನ್ ಸಿಗ್ನಲ್..!