ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೋರ್ಟ್ ಆದೇಶದಂತೆ ಲೋಕಾಯುಕ್ತರು ತನಿಖೆ ಆರಂಭಿಸಿದ್ದು, ಒಟ್ಟು 4 ತಂಡಗಳನ್ನು ರಚನೆ ಮಾಡಲಾಗಿದೆ. ಮುಡಾ ಕೇಸ್ನಲ್ಲಿ ಸಿಎಂ ಆಯ್ತು, ಸಿಎಂ ಪತ್ನಿ ಆಯ್ತು, ಇದೀಗ ಸಿಎಂ ಪುತ್ರನಿಗೆ ಸಂಕಷ್ಟ ಎದುರಾಗಿದೆ.
ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮುಡಾ ಸೈಟ್ ಹಂಚಿಕೆ ಹಗರಣದ ಉರುಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸುತ್ತಿಕೊಳ್ಳುವ ಸಾಧ್ಯತೆ ಇದ್ದು, ಪ್ರಕರಣದಲ್ಲಿ ಅವರ ಹೆಸರು ಹೆಸರಿಸಬೇಕು ಎಂದು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ ನಡೆದಿದೆ. ದೂರುದಾರ ಪ್ರದೀಪ್ ಕುಮಾರ್ ಇಂದು ಈ ಸಂಬಂಧ ಜನಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹೆಸರು ಉಲ್ಲೇಖ ಇದೆ. ಆದರೆ, ಯತೀಂದ್ರ ಸಿದ್ದರಾಮಯ್ಯ ಹೆಸರು ಉಲ್ಲೇಖ ಇಲ್ಲ. ಮುಡಾ ನಿವೇಶನ ಹಂಚಿಕೆಯಲ್ಲಿ ಯತೀಂದ್ರ ಅವರು ಸಹ ಪ್ರಭಾವ ಬೀರಿದ್ದರು ಅನ್ನೋ ಆರೋಪ ಮಾಡಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ಅವರ ಹೆಸರು ಸೇರಿಸಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ದೂರುದಾರ ಪ್ರದೀಪ್ ಸಿದ್ಧತೆ ನಡೆಸಿದ್ದಾರೆ. ಇನ್ನು ಮುಡಾ ಕೇಸ್ನಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಹೆಸರು ಸೇರ್ಪಡೆ ಆಗುತ್ತಾ ಎಂದು ಕಾದುನೋಡಬೇಕಾಗಿದೆ.
ಇದನ್ನೂ ಓದಿ : ಬಾಲಿವುಡ್ನ ನಟ ಗೋವಿಂದಗೆ ಗುಂಡೇಟು – ಆಸ್ಪತ್ರೆಗೆ ದಾಖಲು..!