Download Our App

Follow us

Home » ರಾಜಕೀಯ » ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಕಂಪ್ಲೀಟ್​ ಲಾಕ್ ​​- FIR ದಾಖಲಿಸಲು ಕೋರ್ಟ್ ಆದೇಶ..!

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಕಂಪ್ಲೀಟ್​ ಲಾಕ್ ​​- FIR ದಾಖಲಿಸಲು ಕೋರ್ಟ್ ಆದೇಶ..!

ಬೆಂಗಳೂರು : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್​ನಲ್ಲಿ ಹಿನ್ನಡೆ ಆಗಿತ್ತು. ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಳ್ಳುತ್ತಿದ್ದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿಂದು ಮುಡಾ ಬಗ್ಗೆ ವಿಚಾರಣೆ ನಡಿದಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್​​ ಶಾಕ್​​ ಎದುರಾಗಿದೆ.

ಸಿಎಂ ಸಿದ್ದು ವಿರುದ್ಧ  ತನಿಖೆ ಮಾಡಲು ವಿಶೇಷ ಕೋರ್ಟ್​ ಗ್ರೀನ್​ ಸಿಗ್ನಲ್​​​ ಕೊಟ್ಟಿಟ್ಟು, FIR ದಾಖಲಿಸಲು ಆದೇಶ ನೀಡಿದೆ. ಜನಪ್ರತಿನಿಧಿಗಳ ಕೋರ್ಟ್​ನಲ್ಲೂ ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದ್ದು, ಮೈಸೂರು ಲೋಕಾಯುಕ್ತ SP ನೇತೃತ್ವದಲ್ಲಿ ತನಿಖೆಗೆ ಕೋರ್ಟ್​ ಆದೇಶಿಸಿದೆ. ಮೈಸೂರು SP ಉದೇಶ್​ ನೇತೃತ್ವದಲ್ಲಿ CrPC 153(6) ಅಡಿಯಲ್ಲೇ ತನಿಖೆ ನಡೆಯಲಿದೆ. 6 ವಾರಗಳಲ್ಲಿ ತನಿಖಾ ವರದಿ ನೀಡಲು ಲೋಕಾಯುಕ್ತಕ್ಕೆ ಕೋರ್ಟ್​ ಡೆಡ್​ಲೈನ್​​ ಕೊಟ್ಟಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ನೇಹಮಯಿ ಕೃಷ್ಣ ಎಂಬುವವರು ಜನಪ್ರತಿನಿಧಿಗಳ ಕೋರ್ಟ್​​ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಇದನ್ನು ವಿಚಾರಣೆಗೆ ನಡೆಸಬೇಕೋ ಬೇಡ್ವಾ ಎನ್ನುವ ಆದೇಶ ಕಾಯ್ದಿರಿಸಿ​ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿತ್ತು.

ಅಷ್ಟರಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಅನುಮತಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​, ಜನಪ್ರತಿನಿಧಿಗಳ ಕೋರ್ಟ್​ನಲ್ಲಿನ ವಿಚಾರಣೆಗೆ ತಡೆ ನೀಡಿತ್ತು. ಆದ್ರೆ, ನಿನ್ನೆ ಹೈಕೋರ್ಟ್​ ಸಿದ್ದರಾಮಯ್ಯನವರ ಅರ್ಜಿ ವಜಾ ಮಾಡಿದ್ದು, ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ. ಇದರಿಂದ ಇತ್ತ ಜನಪ್ರತಿನಿಧಿಗಳ ಕೋರ್ಟ್​ ಸಹ ಖಾಸಗಿ ದೂರಿನ ಅರ್ಜಿ ವಿಚಾರಣೆಯನ್ನು ಇಂದು ನಡೆದಿದೆ. ಇದೀಗ ಜನಪ್ರತಿನಿಧಿಗಳ ಕೋರ್ಟ್​ನಲ್ಲೂ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ. ಹೀಗಾಗಿ ಸಿಎಂ ಸಿದ್ದುಗೆ ಡಬಲ್​ ಡೇ.. ಡಬಲ್​ ಶಾಕ್​​​ ಎದುರಾದಂತಾಗಿದೆ.

ಇದನ್ನೂ ಓದಿ : ನಾನು PM ಅಲ್ಲ, CM ಅಲ್ಲ.. ಹೋಗಿ ಅವ್ರ ಮನೆ ಮುಂದೆ ಸ್ಟ್ರೈಕ್ ಮಾಡಿ – Rummy ಕುರಿತ ಪ್ರಶ್ನೆಗೆ ನಟ ಕಿಚ್ಚ ಸುದೀಪ್ ಗರಂ..!

Leave a Comment

DG Ad

RELATED LATEST NEWS

Top Headlines

ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಇನ್ಸ್​ಪೆಕ್ಟರ್​ ಅಯ್ಯಣ್ಣ ರೆಡ್ಡಿ ಅರೆಸ್ಟ್..!

ಬೆಂಗಳೂರು : ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಶಾಸಕ ಮುನಿರತ್ನ ಮಾಡಿರೋ ಹನಿಟ್ರ್ಯಾಪ್​​ಗೆ ಇನ್ಸ್ಪೆಕ್ಟರ್

Live Cricket

Add Your Heading Text Here