ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನವನ್ನು ಅಕ್ರಮವಾಗಿ ಪಡೆದಿದ್ದಾರೆಂಬ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಸತತ 2 ಗಂಟೆಗಳ ಕಾಲ ಸಿಎಂ ವಿಚಾರಣೆ ನಡೆಸಲಾಗಿದ್ದು, 75ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು.
ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ನೋಟಿಸ್ ಕೊಡಲಾಗಿದೆ. ಮತ್ತೆ ಕರೆದ್ರೆ ವಿಚಾರಣೆಗೆ ಬರಬೇಕೆಂದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾ SP ಉದೇಶ್ ನೋಟಿಸ್ ಕೊಟ್ಟಿದ್ದಾರೆ.
ಇನ್ನು ಲೋಕಾ ವಿಚಾರಣೆ ಬಳಿಕ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ನಾನು ಯಾವುದೇ ಆತಂಕಗೊಂಡಿಲ್ಲ. CBI ಯಾರ ಕೈಯಲ್ಲಿರೋದು? ಬಿಜೆಪಿಯವರು ಎಷ್ಟು ಕೇಸ್ CBIಗೆ ಕೊಟ್ಟಿದ್ದಾರೆ? ಎಲ್ಲವೂ ಕಾನೂನು ಬದ್ದವಾಗಿ ನಡೆದಿದೆ. ಹೈಕೋರ್ಟ್ ಸಮನ್ಸ್ ಇನ್ನು ನನಗೆ ಬಂದಿಲ್ಲ. ಬಿಜೆಪಿ-ಜೆಡಿಎಸ್ ಅವರು ಸುಳ್ಳು ಆರೋಪ ಮಾಡ್ತಿದ್ದಾರೆ ಎಂದು ತಿಳೀಸಿದ್ದಾರೆ.
ಇದನ್ನೂ ಓದಿ : ಬಿಗ್‌ಬಾಸ್ ಮನೆಯಲ್ಲಿ ಗೌತಮ್‌ರನ್ನು ಕೆಣಕಿದ ಕನ್ನಡ ಟೀಮ್ – ಸೇಡು ತೀರಿಸಿಕೊಳ್ಳಲು ರೆಡಿಯಾದ ಗೌತಮ್..!