Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್‌ – ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ..!

ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್‌ – ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ..!

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಮನವಿ ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ವಿಚಾರಣೆ ನಡೆಸಿದ ಕೋರ್ಟ್​ ಅರ್ಜಿ ವಿಚಾರಣೆಯನ್ನು ಸೆ.2ರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ  ಹೈಕೋರ್ಟ್‌ನಲ್ಲಿ ಇನ್ನೆರಡು ದಿನಗಳ ಕಾಲ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

ಸೋಮವಾರದವರೆಗೂ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​ ಸಿಕ್ಕಿದ್ದು, ಕೆಳ ನ್ಯಾಯಾಲಯದ ಪ್ರಕ್ರಿಯೆಗೂ ತಡೆ ನೀಡಿದ್ದಾರೆ. ಇನ್ನು ಸೆ.2ರ ಒಳಗೆ ಎಲ್ಲರೂ ವಾದ ಮುಗಿಸಿ ಹೈಕೋರ್ಟ್​ ಜಡ್ಜ್​ ತಿಳಿಸಿದ್ದಾರೆ.

ಇದನ್ನೂ ಓದಿ : ಕ್ರೈಸ್ತ ಸಂಪ್ರದಾಯದ ಮದುವೆಗೂ ಮುನ್ನ ರೋಸ್​ ಶಾಸ್ತ್ರ ಆಚರಿಸಿಕೊಂಡ ಸೋನಾಲ್​​ – ಫೋಟೋಸ್ ಇಲ್ಲಿವೆ ನೋಡಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ ವಿದ್ಯಾರ್ಥಿ ಕೇರಳದಲ್ಲಿ ನಿಫಾ ವೈರಸ್​ಗೆ ಬಲಿ – ರಾಜ್ಯದಲ್ಲಿ ಹೆಚ್ಚಿದ ಆತಂಕ..!

ಬೆಂಗಳೂರು : ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಕೇರಳದಲ್ಲಿ ಮಾರಣಾಂತಿಕ ನಿಫಾ ವೈರಸ್​ಗೆ ಬಲಿಯಾಗಿದ್ದಾನೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲಪ್ಪುರಂನ ವಿದ್ಯಾರ್ಥಿ ಊರಿಗೆ ಹೋಗಿದ್ದಾಗ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಕಳೆದ

Live Cricket

Add Your Heading Text Here