ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮುಡಾ ಕಚೇರಿ ಸೇರಿದಂತೆ ಹಲವೆಡೆ ರೇಡ್ ಮಾಡಿ, 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ರಿಯಲ್ ಎಸ್ಟೇಟ್ ಉದ್ಯಮಿಗಳು, ಮಧ್ಯವರ್ತಿಗಳ ವಿರುದ್ದ PMLA 2002 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದರು. ಇದೀಗ ಇಡಿ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. ಅಷ್ಟೇ ಅಲ್ಲದೆ ಮೊದಲ ಬಾರಿಗೆ ಇಡಿ ಅಧಿಕೃತವಾಗಿ ಮಾಹಿತಿ ನೀಡಿದೆ. 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಬಗ್ಗೆ ಜಾರಿ ನಿರ್ದೇಶನಾಲಯ ಟ್ಟೀಟರ್ನಲ್ಲಿ ಮಾಹಿತಿ ನೀಡಿದೆ.
ಇದನ್ನೂ ಓದಿ : ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾದ ಸೇನೆಯಲ್ಲಿದ್ದ 12 ಭಾರತೀಯರು ಬಲಿ, 16 ಮಂದಿ ನಾಪತ್ತೆ..!
Post Views: 173