ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ನಿವೇಶನಗಳ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು CBIಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಮುಡಾ ಪ್ರಕರಣವನ್ನು CBIಗೆ ಕೊಡಬೇಕೆಂದು RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಿಗಧಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಡಾ ಪ್ರಕರಣ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ. ಲೋಕಾಯುಕ್ತದ ಮೇಲೆ ನಂಬಿಕೆ ಇಲ್ಲ, ಈ ತನಿಖೆಯನ್ನು CBIಗೆ ವಹಿಸುವಂತೆ ಸ್ನೇಹಮಯಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ಅರ್ಜಿ ವಿಚಾರಣೆ ನಡೆಯಲಿದ್ದು, ಸ್ನೇಹಮಯಿ ಕೃಷ್ಣ ಪರ ವಕೀಲರು ವಾದ ಮಂಡನೆ ಮಾಡಲಿದ್ದಾರೆ.
ಇಲ್ಲಿವರೆಗೆ ಲೋಕಾಯುಕ್ತ, ಜಾರಿ ನಿರ್ದೇಶನಾಲಯ ಹಾಗೂ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ಸಿಬಿಐಗೆ ಪ್ರಕರಣವನ್ನು ಒಪ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿರುವುದು ಈಗ ಮತ್ತಷ್ಟು ಕುತೂಹಲಕ್ಕೆ ಎಡೆಮಾಡಿದೆ.
ಇದನ್ನೂ ಓದಿ : ಯಾವ್ದೋ ಗೊತ್ತಿಲ್ದೇ ಇರೋ ಹುಡುಗಿಗೆ ತಾಳಿ ಕಟ್ತೀವಿ, ಎಲ್ಲನೂ ಅವಳ ಜೊತೆ ಶೇರ್ ಮಾಡ್ಬೇಕು – ಲೈಫ್ ಬಗ್ಗೆ ಕಿಚ್ಚ ಹೇಳಿದ್ದೇನು?