ಬೆಂಗಳೂರು : ಮುಡಾ ಅಕ್ರಮ ಸೈಟ್ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿತ್ತು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಡಾ ಹಗರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಸದ್ಯ ಈ ವಿಚಾರವಾಗಿ ಸೆಪ್ಟೆಂಬರ್ 24ರ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.
ತನಿಖೆಯ ಅಖಾಡಕ್ಕಿಳಿದಿರುವ ಕೇಂದ್ರದ ಜಾರಿನಿರ್ದೇಶಾನಲಯ ಇತ್ತೀಚೆಗೆ ಹಲವು ಸಾಕ್ಷ್ಯಾಧಾರಗಳನ್ನು ವಶಕ್ಕೆ ಪಡೆದಿತ್ತು. ಅಕ್ಟೋಬರ್ 18 – 19ರಂದು ಎರಡು ದಿನ ನಡೆಸಿದ ದಾಳಿಯಲ್ಲಿ ಹಲವಾರು ದಾಖಲೆಗಳನ್ನು ಸಂಗ್ರಹಿಸಿದ್ದರು.
ಇದನ್ನೂ ಓದಿ : ಮುಕ್ತಾಯದ ಹಂತದಲ್ಲಿ ಆರ್.ಸಿ.ಸ್ಟುಡಿಯೋ ನಿರ್ಮಾಣದ ‘ಫಾದರ್’ ಸಿನಿಮಾ..!
Post Views: 13