ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR ಅನ್ವಯ ಮುಡಾ ಪ್ರಕರಣ ಸಂಬಂಧ ಇಡಿ ಪ್ರಕರಣ ದಾಖಲಿಸಿದೆ.
ಇದು MUDA ನಿವೇಶನ ಹಂಚಿಕೆ ಹಗರಣದ ಬಗ್ಗೆ ED ನಡೆಸಿದ ತನಿಖೆಯಲ್ಲಿ ಕಂಡು ಬಂದ ಅಂಶಗಳು. ಪಿಸಿ ಅಕ್ಟ್ 1988 ಅಡಿಯಲ್ಲಿ ಸಿದ್ದರಾಮಯ್ಯ ಮತ್ತಿತರ ವಿರುದ್ದ ಪ್ರಕರಣ ದಾಖಲಾಗಿತ್ತು. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಮುಡಾಗೆ ಸೇರಿದ 56 ಕೋಟಿ ಮೌಲ್ಯದ 3.16 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಭೂಮಿಯನ್ನು ಮುಡಾ ರೂ.3,24,700/- ಗೆ ಸ್ವಾಧೀನಪಡಿಸಿಕೊಂಡಿತು. ಪೋಶ್ ಪ್ರದೇಶದಲ್ಲಿ 14 ನಿವೇಶನಗಳ ರೂಪದಲ್ಲಿ ಪರಿಹಾರವು ರೂ. 56 ಕೋಟಿ (ಅಂದಾಜು) ಮೌಲ್ಯದ್ದಾಗಿದೆ. ಪಾರ್ವತಿ ಅವರಿಗೆ ಅಕ್ರಮ ಪರಿಹಾರ ನಿವೇಶನ ಹಂಚಿಕೆಯಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಪ್ರಮುಖ ಪಾತ್ರ ವಹಿಸಿರುವುದು ಇಡಿ ತನಿಖೆಯಲ್ಲಿ ಬಹಿರಂಗವಾಗಿದೆ. ತನಿಖೆಯ ಸಮಯದಲ್ಲಿ ದಾಳಿಗಳು ನಡೆಸಲಾಗಿದೆ.
ಶ್ರೀಮತಿ ಬಿ.ಎಂ. ಪಾರ್ವತಿ ಅವರಿಗೆ ಹಂಚಿಕೆಯಾದ 14 ನಿವೇಶನಗಳನ್ನು ಹೊರತುಪಡಿಸಿ, ಹೆಚ್ಚಿನ ಸಂಖ್ಯೆಯ ನಿವೇಶನಗಳನ್ನು ಮುಡಾ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಪರಿಹಾರವಾಗಿ ಅಕ್ರಮವಾಗಿ ಹಂಚಿಕೆ ಮಾಡಿದೆ. ಹಂಚಿಕೆಯಾದ ನಿವೇಶನಗಳನ್ನು ಲಾಭಕ್ಕೆ ಮಾರಾಟ ಮಾಡಿ ಕೋಟ್ಯಾಂತರ ಹಣ ಲಾಭಾಂಶ ಪಡೆದಿರುವುದು ತನಿಖೆ ವೇಳೆ ಪತ್ತೆಯಾಗಿದೆ. ದಾಳಿ ವೇಳೆ ಪ್ರಭಾವಿ ವ್ಯಕ್ತಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಬೇನಾಮಿಗಳು/ನಕಲಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿರುವುದು ಬಹಿರಂಗವಾಗಿದೆ.
ಆಗಿನ ಮುಡಾ ಅಧ್ಯಕ್ಷರು ಮತ್ತು ಮುಡಾ ಆಯುಕ್ತರಿಗೆ ಸ್ಥಿರ ಆಸ್ತಿ, ಮುಡಾ ನಿವೇಶನಗಳು, ನಗದು ಇತ್ಯಾದಿಗಳ ರೂಪದಲ್ಲಿ ಅಕ್ರಮವಾಗಿ ಹಣ, ಆಸ್ತಿ ಸಂಪಾದನೆ ಮಾಡಿರುವುದು ದಾಖಲೆಗಳ ಪರಿಶೀಲನೆ ಮಾಡಿದಾಗ ಬಯಲಾಗಿದೆ. ಮುಡಾದ ಹಿಂದಿನ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ಅವರ ಸಂಬಂಧಿಕರ ಹೆಸರಿನಲ್ಲಿ ಆಸ್ತಿ, ಐಷಾರಾಮಿ ವಾಹನಗಳು ಇತ್ಯಾದಿಗಳನ್ನು ಖರೀದಿ ಮಾಡಿದ್ದು, ಸಹಕಾರಿ ಸಂಘದ ಮೂಲಕ ಹಣವನ್ನು ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಮುಡಾ ಹಗರಣ – 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED..!