ಮೈಸೂರು : ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ತಂದಿರುವ ಮುಡಾ ಹಗರಣದ ವಿಚಾರಣೆಗೆ, ಲೋಕಾಯುಕ್ತ ಪೊಲೀಸರು ಸಜ್ಜಾಗಿದ್ದಾರೆ. ಈ ಮಧ್ಯೆ ದೂರುದಾರ ಸ್ನೇಹಮಯಿ ಕೃಷ್ಣ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ್ದಾರೆ. ಆ ಮೂಲಕ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಇ-ಮೇಲ್ ಹಾಗೂ ಪತ್ರ ಬರೆಯುವ ಮೂಲಕ ಜಾರಿ ನಿರ್ದೇಶನಾಲಯದ ಬೆಂಗಳೂರು ನಿರ್ದೇಶಕರಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಮನಿ ಲ್ಯಾಂಡರಿಂಗ್ ಆ್ಯಕ್ಟ್ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಮುಡಾದಲ್ಲಿ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : ಎಷ್ಟೊಂದು ಸಖತ್ ಆಗಿದೆ ಗೊತ್ತಾ ಈ ಬಾರಿಯ ಬಿಗ್ ಬಾಸ್ ಮನೆ – ಮೇಕಿಂಗ್ ವಿಡಿಯೋ ಔಟ್..!
Post Views: 50