ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಸತತ 10 ದಿನಗಳಿಂದ ಸೆರೆವಾಸದಲ್ಲಿದ್ದು, ಇಂದಿಗೆ ದರ್ಶನ್ ಗ್ಯಾಂಗ್ನ ಕಸ್ಟಡಿ ಅವಧಿ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ ಬಂಧಿತ 17 ಆರೋಪಿಗಳನ್ನು ಪೊಲೀಸರು 24ನೇ ACMM ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.
ಈ ಪ್ರಕರಣದ ಎಲ್ಲಾ ಆರೋಪಿಗಳನ್ನು ಪೊಲೀಸರು ಒಂದೇ ವ್ಯಾನ್ನಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ ದರ್ಶನ್ ನೋಡಲು ಕೋರ್ಟ್ಗೆ ಅಭಿಮಾನಿಗಳು ಬರೋ ಸಾಧ್ಯತೆ ಇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ, ಕೋರ್ಟ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಕೋರ್ಟ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿರುವ ಪೊಲೀಸರು , 2 KSRP ತುಕಡಿ ಸೇರಿ 500ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಿದ್ದಾರೆ.
ಇನ್ನು ತನಿಖೆ, ಮಹಜರು ಬಹುತೇಕ ಮುಗಿಸಿರೋ ಪೊಲೀಸರು 118 ಸಾಕ್ಷ್ಯಗಳನ್ನು ಕಲೆಕ್ಟ್ ಮಾಡಿದ್ದಾರೆ. ಹೀಗಾಗಿ ಹಂತಕರನ್ನು ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ. ಆದರೆ ಕೋರ್ಟ್ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಿದೆಯೇ ಅಥವಾ ನ್ಯಾಯಾಂಗ ಬಂಧನ ವಿಧಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ : ಹಾಸನದಲ್ಲಿ ಹಾಡುಹಗಲೇ ಗುಂಡಿನ ದಾಳಿ – ಇಬ್ಬರು ಸಾವು..!