ಮುಂಬೈ : ಮುಂಬೈನ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಘಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಸದ್ಯ ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಲ್ನ ಪ್ಲಾಟ್ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್ಪುರ್ ಎಕ್ಸ್ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ.
ಇದನ್ನೂ ಓದಿ : ‘ಫೈರ್ ಫ್ಲೈ’ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿ : ಇವೆಂಟ್ನಲ್ಲಿ ಶಿವಣ್ಣ-ಗೀತಾ ಶಿವರಾಜ್ ಕುಮಾರ್ ಭಾಗಿ..!
Post Views: 63