ಮಂಗಳೂರು : ಕೂಳೂರಿನ ಫಲ್ಗುಣಿ ನದಿಗೆ ಹಾರಿ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಶೊಹೇಬ್ ಮತ್ತು ಸಿರಾಜ್ನ್ನು ಬಂಟ್ವಾಳದ ಕಲ್ಲಡ್ಕ ಬಳಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆಸುತ್ತಿದ್ದಾರೆ.
ಇನ್ನು ಮುಮ್ತಾಜ್ ಆಲಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮಹಿಳೆಯನ್ನು ಉಪಯೋಗಿಸಿ ಮಾಡಿದ ಬ್ಲ್ಯಾಕ್ ಮೇಲ್ ಕಾರಣ ಎಂದು ಅಲಿ ಕುಟುಂಬಸ್ಥರು ಆರೋಪಿಸಿದ್ದರು. ಈ ಬಗ್ಗೆ ಮುಮ್ತಾಜ್ ಅಲಿ ತಮ್ಮ ಹೈದರ್ ಅಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಆರು ಮಂದಿಯ ಮೇಲೆ ದೂರು ನೀಡಿದ್ದರು.
ರೆಹಮತ್ ಅಲಿಯಾಸ್ ಆಯಿಷಾ ಎಂಬ ಮಹಿಳೆಯನ್ನು ಬಳಸಿಕೊಂಡು ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ. ಆರು ಮಂದಿಯ ತಂಡ ಬ್ಲ್ಯಾಕ್ ಮೇಲ್ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಕಾವೂರು ಠಾಣೆಯಲ್ಲಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ,ಶೋಯೆಬ್ ಮತ್ತು ಮುಮ್ತಾಜ್ ಅಲಿ ಕಾರು ಚಾಲಕ ಸಿರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಕುರಿತು ತನಿಖೆ ಕೈಗೊಂಡಿದ್ದ ಮಂಗಳೂರು ಪೊಲೀಸರು ನಿನ್ನೆ ಮೂವರನ್ನು ಬಂಧಿಸಿದೆ. ಸದ್ಯ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ಯುವ ದಸರಾ ವೇದಿಕೆಯಲ್ಲಿ ‘ಅಪ್ಪು’ ನೆನೆದು ಎಮೋಷನಲ್ ಆದ ರ್ಯಾಪರ್ ಬಾದ್ಶಾ.. ವಿಡಿಯೋ ವೈರಲ್..!