ಬೆಂಗಳೂರು : ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಕೇಸ್ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಪ್ರಕರಣ ಸಂಕಷ್ಟ ತಂದೊಡ್ಡಿದೆ. ಶುಕ್ರವಾರ ಬಂಧನಕ್ಕೊಳಗಾಗಿದ್ದ ಅವರನ್ನು ಶನಿವಾರ ಕೋರ್ಟ್ಗೆ ಹಾಜರುಪಡಿಸಲಾಯಿತು. ನ್ಯಾಯಾಲಯ ಮುನಿರತ್ನರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮುನಿರತ್ನ ವಿರುದ್ದದ ಪ್ರಕರಣದ ತನಿಖೆಗೆ ಖಡಕ್ IPS ಅಧಿಕಾರಿಗಳ SIT ತಂಡ ರಚನೆಯಾಗಿದೆ.
ಮುನಿರತ್ನ ವಿರುದ್ದ ದಾಖಲಾಗಿರುವ ಪ್ರಕರಣದ ತನಿಖೆ ಚುರುಕುಗೊಂಡಿದ್ದು, SIT ರಚನೆಯಾದ ಕೂಡಲೇ ಟೀಂ ಅಲರ್ಟ್ ಆಗಿದೆ. ಓರ್ವ ಮಹಿಳಾ IPS ಅಧಿಕಾರಿಯನ್ನು ಸೇರಿಸಿ SIT ಟೀಂ ರಚನೆ ಮಾಡಿದ್ದು, SIT ಮುಖ್ಯಸ್ಥರಾಗಿ B.K ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ADGP ಬಿ.ಕೆ ಸಿಂಗ್ ನೇತೃತ್ವದಲ್ಲಿ ಮೂವರು ಸದಸ್ಯರನ್ನು ನೇಮಕ ಮಾಡಿದ್ದಾರೆ. ಬೆಂಗಳೂರು ಕೇಂದ್ರ ವಲಯ IGP ಲಾಭುರಾಮ್, ರೈಲ್ವೇ SP ಸೌಮ್ಯಲತಾ, SP ಸೈಮನ್ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.
IPS ಅಧಿಕಾರಿ ಸೌಮ್ಯಲತಾ ಅವರು ಸಂತ್ರಸ್ತೆಯನ್ನು ವಿಚಾರಣೆ ನಡೆಸಿ ಮಾಹಿತಿ ಪಡೆಯಲಿದ್ದಾರೆ. IGP ಲಾಭುರಾಮ್ ಅವರು ಕೇಸ್ ಬಗ್ಗೆ ಮಾಹಿತಿ ಪಡೆದು ತನಿಖೆ ಚುರುಕುಗೊಳಿಸಲಿದ್ದಾರೆ. ಬೆಂಗಳೂರು ಕೇಂದ್ರ ವಲಯ IGP ಲಾಭುರಾಮ್ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿದ್ದಾರೆ. ಸೋಮವಾರ ಬೆಳಗ್ಗೆ SIT ರಚನೆ ವರದಿ ಕೋರ್ಟ್ಗೆ ಸಲ್ಲಿಸಿ ಮುನಿರತ್ನರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಮುನಿರತ್ನ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ – ದೇಹವನ್ನ 30ಕ್ಕೂ ಹೆಚ್ಚು ಪೀಸ್ ಮಾಡಿ ಫ್ರಿಡ್ಜ್ನಲ್ಲಿಟ್ಟ ಆರೋಪಿ..!