ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಾದ-ಪ್ರತಿವಾದ ಆಲಿಸಿದ ಬಳಿಕ ಮಧ್ಯಂತರ ಜಾಮೀನು ಅರ್ಜಿಯನ್ನು ವಿಸ್ತರಿಸಿದೆ.
ಬೆನ್ನುಹುರಿ ಶಸ್ತ್ರಚಿಕಿತ್ಸೆಗೆಂದು ನಟ ದರ್ಶನ್ 6 ವಾರಗಳ ಮಧ್ಯಂತರ ಜಾಮೀನು ಪಡೆದುಕೊಂಡು ಅಕ್ಟೋಬರ್ 30 ರಂದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಈಗಾಗಲೇ 5 ವಾರ ಕಳೆದಿದ್ದು, ಇನ್ನೆರಡು ದಿನಗಳಲ್ಲಿ ಜಾಮೀನು ಅವಧಿ ಮುಕ್ತಾಯವಾಗಲಿದೆ.
ಹೀಗಾಗಿ ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡುವಂತೆ ಮಾಡಿದ್ದರು. ನಟ ದರ್ಶನ್ಗೆ ಡಿಸೆಂಬರ್ 11 ರವರೆಗೆ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿತ್ತು. ಅಂದೇ ಸರ್ಜರಿ ಮಾಡುತ್ತಿರುವುದಾಗಿ ಹೈಕೋರ್ಟ್ಗೆ ಅವರ ಪರ ವಕೀಲ ಸಿ.ವಿ ನಾಗೇಶ್ ಮಾಹಿತಿ ನೀಡಿದ್ದರು. ಈ ಬಳಿಕ ಮಧ್ಯಂತರ ಆದೇಶವನ್ನು ಮುಂದಿನ ಜಾಮೀನು ಆದೇಶದ ತೀರ್ಪು ನೀಡುವವರೆಗೂ ವಿಸ್ತರಿಸಿ ಆದೇಶಿಸಿದೆ.
ಇದನ್ನೂ ಓದಿ : ಲಕ್ಷುರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣ ಮಾಡಿದ ಆಲಿಯಾ ಭಟ್.. ವಿಡಿಯೋ ವೈರಲ್..!